ಸವಣೂರು: ತೆಂಗಿನಕಾಯಿ ಕೀಳುವಾಗ ಮರದಿಂದ ಬಿದ್ದು ಮಹಿಳೆ ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟಿದ್ದಾರೆ.
ಸುಚಿತ್ರ ರವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.
ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ..