Wednesday, October 18, 2023

ಹಾಡು ಹಗಲೇ ಯುವತಿಗೆ ಚೂರಿ ಇರಿದ ಪ್ರಕರಣ ; ಆರೋಪಿ ಪೊಲೀಸ್ ವಶಕ್ಕೆ

Must read

ಪುತ್ತೂರು: ಯುವತಿಗೆ ಹಾಡು ಹಗಲೇ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನವ ಮಾಹಿತಿ ಲಭ್ಯವಾಗಿದೆ.

ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ ಗೌರಿ ಎಂದು ತಿಳಿದು ಬಂದಿದೆ. ಆರೋಪಿಯೂ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ತಿಳಿದು ಬಂದಿದೆ. ಈತ ಜೆಸಿಬಿ ಆಪರೇಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಪುತ್ತೂರು ಪೇಟೆಗೆ ಬಂದಿದ್ದ ಯುವತಿ ಪುತ್ತೂರಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಏಕಾಏಕಿ ಬಂದ  ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂಬಾತ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದ್ದು, ಯುವಕ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ.

ಗಾಯಾಳು ಯುವತಿಯನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದು, ಯುವತಿಯ ಸ್ಧಿತಿ ಚಿಂತಾಜನಕವಾಗಿದೆ. ಯುವತಿ ಸರಕಾರಿ ಬಸ್‌ ನಿಲ್ದಾಣದ ಬಳಿಯ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಸದ್ಯ ಚೂರಿ ಇರಿದ ಪದ್ಮರಾಜ್ ಎಂಬಾತನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮಾಹಿತಿ ನೀಡಿದ್ದಾರೆ.

 

More articles

Latest article