ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಆಗಸ್ಟ್ 16ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.