Wednesday, October 18, 2023

ಶಾಲಾ ಶಿಕ್ಷಕಿಗೆ ಬೆದರಿಕೆ ಹಾಕಿದ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಶಾಸಕ ರಾಜೇಶ್ ನಾಯ್ಕ್ ಅಧಿಕಾರಿಗಳಿಗೆ ಸೂಚನೆ

Must read

ಶಾಲಾ ಶಿಕ್ಷಕಿಗೆ ಬೆದರಿಕೆ ಹಾಕಿ ಕ್ಷಮೆ ಯಾಚಿಸಿದ ಪ್ರಕರಣದ ಹಿಂದೆ ಇರುವ ಎಲ್ಲಾ ಆರೋಪಿಗಳ ಮೇಲೆ ಕಾನೂನು ಕ್ರಮವನ್ನು ಕೈಗೊಳ್ಳಿ ಮತ್ತು ಸಮಗ್ರವಾದ ತನಿಖೆಯನ್ನು ನಡೆಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪೊಲೀಸ್ ಇಲಾಖೆ,ಶಿಕ್ಷಣ ಇಲಾಖೆಯ ಅಧಿಕಾರಿ ಹಾಗೂ ತಹಶಿಲ್ದಾರ್ ಅವರಿಗೆ ಸೂಚನೆ ನೀಡಿದ್ದಾರೆ.

ಮಂಚಿ ಸರಕಾರಿ ಶಾಲೆಯೊಂದರ ಶಿಕ್ಷಕಿಯನ್ನು ಬೆದರಿಸಿದ್ದಲ್ಲದೆ,ಅವರು ಕ್ಷಮೆ ಕೇಳುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಇದೀಗ ವಿಟ್ಲ ಪೋಲೀಸ್ ಠಾಣೆಯ ಮೆಟ್ಟಲು ಹತ್ತಿದ್ದು, ಇಡೀ ಪ್ರಕರಣದ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ ಮತ್ತು ತಪ್ಪಿತಸ್ಥರಿಗೆ ಕಾನೂನು ಕ್ರಮ ಕೈಗೊಳ್ಳಲು ಶಾಸಕ ರಾಜೇಶ್ ನಾಯ್ಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸರಕಾರಿ ಶಾಲೆಯ ಶಿಕ್ಷಕಿಯನ್ನು ಬೆದರಿಕೆ ಹಾಕಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಅರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ .

ಸರಕಾರಿ ಶಾಲೆಯಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡಿದರೆ ಅಂತವರ ಮೇಲೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು,ಅನಾವಶ್ಯಕವಾಗಿ ಸಮಸ್ಯೆ ದೊಡ್ಡದಾಗುವಂತೆ ಮಾಡಬಾರದು ಎಂದು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರುಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆ ಏನು
ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ದ.ಕ‌.ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಗೆ ವಿದ್ಯಾರ್ಥಿಗಳು ಜೈಕಾರ ಹಾಕಿದ್ದಾರೆ, ಈ ಕೆರಳಿದ SDPI ಸದಸ್ಯ ಬಶೀರ್ ಎಂಬಾತ ಶಾಲೆಯಲ್ಲಿ ರಂಪಾಟ ಮಾಡಿದ್ದಲ್ಲದೆ,ವಿದ್ಯಾರ್ಥಿಗಳ ಪರವಾಗಿ ಶಾಲಾ ಶಿಕ್ಷಕಿ ಕ್ಷಮೆ ಕೋರುಬೇಕು ಎಂದು ಬೆದರಿಕೆ ಹಾಕಿದ್ದಾನೆ.ಶಾಲಾ ಶಿಕ್ಷಕಿಯನ್ನು ಬೆದರಿಸಿ ಕ್ಷಮೆ ಯಾಚಿಸುವ ವಿಡಿಯೋ ಮಾಡಿ ಬಳಿಕ ಅದನ್ನು ಉದ್ದೇಶಪೂರ್ವಕವಾಗಿ ಸಾಮಾಜಿಕ ‌ಜಾಲತಾಣದಲ್ಲಿ ವೈರಲ್ ಕೂಡ ಮಾಡಲಾಗಿದೆ.ಈ ಬಗ್ಗೆ ವಿಟ್ಲ ಪೋಲೀಸ್ ಠಾಣೆಯಲ್ಲಿ ‌ದೂರು ದಾಖಲಾಗಿತ್ತು.

ಇದೀಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶಾಲಾ ಶಿಕ್ಷಕಿಯನ್ನು ಬೆದರಿಸಿ ಸರಕಾರಿ ಕರ್ತವ್ಯ ಕ್ಕೆ ಅಗೌರವ ತೋರಿರುವ ಆರೋಪಿಗಳನ್ನು ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

More articles

Latest article