Wednesday, October 18, 2023

ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ

Must read

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯದಲ್ಲಿ ಕಸ್ತೂರಿರಂಗನ ವರದಿ ಜಾರಿಗೊಳಿಸುವ ಬಗ್ಗೆ ಮತ್ತೆ ರಾಜ್ಯ ಸರಕಾರ ಹುನ್ನಾರ ನಡೆಸುತ್ತಿದ್ದು, ಪಶ್ಚಿಮ ಘಟ್ಟ ತಪ್ಪಲಿನ ಗ್ರಾಮಗಳ ಜನತೆ ಪ್ರತಿದಿನ ಆತಂಕದ ವಾತಾವರಣದಲ್ಲಿ ಜೀವಿಸುವ ಸ್ಥಿತಿ ನಿರ್ಮಾಣವಾಗಿದೆ. ಕಸ್ತೂರಿ ರಂಗನ್ ಸಮಿತಿಯು ನೀಡಿದ ವರದಿಯಿಂದ ಇದು ದಡಪಟ್ಟಿದೆ. ಪಶ್ಚಿಮ ಘಟ್ಟ ಸೂಕ್ಷ್ಮ ವಲಯ ಪ್ರದೇಶದ ಜನರು ಕಳೆದ 15 ವರ್ಷಗಳಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಗ್ರಾಮ ಗ್ರಾಮಗಳಲ್ಲಿಯೂ ಪ್ರತಿಭಟಿಸಿರುವರು. ಅಷ್ಟೆಲ್ಲ ಆದರೂ ಈ ವರದಿ ಬಗ್ಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರು ಲಿಖಿತವಾಗಿ ಮಾಹಿತಿ ನೀಡದಿರುವುದು ವಿಪರ್ಯಾಸ .ಈ ನಿಟ್ಟಿನಲ್ಲಿ ಇದೀಗ ಮತ್ತೆ ರಾಜ್ಯ ಸರಕಾರ ವರದಿ ಬಗ್ಗೆ ತಕರಾರು ಎತ್ತುತ್ತಿದ್ದು, ಮಲೆನಾಡು ಜನ ಹಿತ ರಕ್ಷಣಾ ವೇದಿಕೆ (ರೀ)ಶಿರಾಡಿ, ವತಿಯಿಂದ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿರುವುದಾಗಿ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ತಿಳಿಸಿದ್ದಾರೆ.

ಅವರು ಮಂಗಳವಾರ ಸುಬ್ರಹ್ಮಣ್ಯದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು .ಈ ಹಿಂದೆಯೇ ಎಲ್ಲಾ ಭಾದಿತ ಗ್ರಾಮಗಳ ಗ್ರಾಮ ಪಂಚಾಯತ್ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿ ಸುವುದು ಬೇಡ ಎಂಬ ಬಗ್ಗೆ ನಿರ್ಣಯ ಕೈಗೊಂಡಿರುತ್ತಾರೆ. ಹಾಗೆಯೇ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತಿ ಸಭೆಯಲ್ಲೂ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಗಿದೆ .ಇದೀಗ ಮಾನಸಿಕ ಒತ್ತಡದಿಂದ ಪಶ್ಚಿಮ ಘಟ್ಟ ಬುಡದಲ್ಲಿ ವಾಸಿಸುತ್ತಿರುವ ರೈತರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ ,ಎಂದು ಕಿಶೋರ್ ಶಿರಾಡಿ ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಜನಹಿತ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸದಸ್ಯರುಗಳಾದ ಶೇಖರಪ್ಪ ,ಹರೀಶ ಕಲಂಗುಡಿ, ಅಚ್ಯುತ ಗೌಡ ಸುಬ್ರಹ್ಮಣ್ಯ , ಶ್ರೀಕಾಂತ್ ಎನ್, ಜಯಪ್ರಕಾಶ್ ಕೂಜುಗೋಡು ಗಿರೀಶ ಪೈಲಾಜೆ, ಸಂತೋಷ ಎಂ, ಚಿದಾನಂದ ಗೌಡ ದೇವ್ಪಾಲು,ಡಾl ಆದರ್ಶ ಜೋಸೆಫ್, ದಿಲೀಪ್ ಉಪ್ಪಳಿಕೆ ಉಪಸ್ಥಿತರಿದ್ದರು.

More articles

Latest article