Sunday, April 21, 2024

ಕೊಲ್ಲಮೊಗ್ರು: ಜೂಜಾಟ ವೇಳೆ ಪೊಲೀಸ್ ದಾಳಿ

ಸುಬ್ರಹ್ಮಣ್ಯ: ಹಣವನ್ನು ಪಣಕ್ಕಿಟ್ಟು ಲೂಡದ ದಾಳವನ್ನು ಉಪಯೋಗಿಸಿ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಒರ್ವನನ್ನು ವಶಕ್ಕೆ ಪಡೆದಿದ್ದು, ಮೂವರು ಪರಾರಿಯಾದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರುದಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಕೊಲ್ಲಮೊಗ್ರು ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಅದೃಷ್ಟ ಆಟವಾದ ಲೂಡ ದಾಳವನ್ನು ಉಪಯೋಗಿಸಿ ಜೂಜಾಟ ಆಟ ಆಡುತ್ತಿರುತ್ತಿರುವ ಖಚಿತ ಮಾಹಿತಿ ಮೇರೆಗೆ ಸುಬ್ರಹ್ಮಣ್ಯ ಠಾಣಾ ಎಸೈ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.

ಕಿರಣ್‌ ಎಂಬಾತನನ್ನು ವಶಕ್ಕೆ ಪಡೆದಿದ್ದು. ಆಡುತ್ತಿದ್ದ ಕುಮಾರ್‌ ಗಡಿಕಲ್ಲು, ಅವಿನ್‌ ಗಡಿಕಲ್ಲು, ಲಕ್ಷ್ಮಣ ಕಡೋಡಿ ಎಂಬವರು ಪರಾರಿಯಾಗಿದ್ದಾರೆ.

ಅದೃಷ್ಟದ ಆಟಕ್ಕೆ ಒಟ್ಟು ರೂಪಾಯಿ 1350 ಹಾಗೂ ಲೂಡದ ದಾಳ-1, ರಟ್ಟಿನ ತುಂಡು -1 ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...