Thursday, October 26, 2023

ಜಿಲ್ಲಾಧ್ಯಕ್ಷರಾಗಿ ಸೋಮಶೇಖರ್ ನಾಯಕ್ ಆಯ್ಕೆ

Must read

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಬೋಧಕೇತರ ಸಂಘ (ರಿ ) ಇದರ ಮಹಾಸಭೆ ನಡೆಯಿತು.

ಮಹಾಸಭೆಯಲ್ಲಿ ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಅನುದಾನಿತ ನೌಕರರ ಸಂಘ ( ರಿ) ಎಂದು ಶೀರ್ಷಿಕೆಯಾಗಿ ಬದಲಾವಣೆ ಮಾಡಿಕೊಳ್ಳಲಾಯಿತು. ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಸಂಘದ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ನಾಯಕ್ ಆಯ್ಕೆಯಾದರು.

ಉಳಿದಂತೆ ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ರವಿಕುಮಾರ್ ಕಾರ್ಯದರ್ಶಿಯಾಗಿ ನೇಮಕಗೊಂಡರು. ಉಳಿದಂತೆ ಕೆನರಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಧುಕೇಶ್ವರ್ ಶಾಸ್ತ್ರಿ ಉಪಾಧ್ಯಕ್ಷರು,

ಎಡಪದವು ವಿವೇಕಾನಂದ ಪದವಿಪೂರ್ವ ಕಾಲೇಜಿನ ಸತೀಶ್ ಕೋಶಾಧಿಕಾರಿ, ಬೆಸೆಂಟ್ ಪದವಿ ಪೂರ್ವ ಕಾಲೇಜಿನ ಕಿರಣಾ ಜತೆ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದರು.

More articles

Latest article