ಉಡುಪಿ: ಇಲ್ಲಿನ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ವೀಡಿಯೋ ಮಾಡಿದ್ದರು ಎಂದು ಆರೋಪಿಸಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಘಟನೆ ಜುಲೈ 18 ರಂದು ನಡೆದಿದ್ದು, ಜುಲೈ 26ರಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದರು.
ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ, ಪ್ರಕರಣವನ್ನು ಎಸ್ ಐ ಟಿ ಗೆ ವಹಿಸುವಂತೆ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ಸರಕಾರವನ್ನು ಆಗ್ರಹಿಸಿದ್ದರು. ಈ ಬಗ್ಗೆ ಕರಾವಳಿಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ಕೂಡ ಮನವಿ ಮಾಡಿದ್ದರು.
ಈ ನಡುವೆ ರಾಜ್ಯ ಸರಕಾರ ಸೋಮವಾರ ಮಹತ್ವದ ಆದೇಶ ಹೊರಡಿಸಿದ್ದು, ಪ್ರಕರಣದ ತನಿಖೆಯನ್ನು ಸಿಐಡಿ ಗೆ ವಹಿಸಿದೆ.