Saturday, April 6, 2024

ಉಜಿರೆ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ನೇತೃತ್ವದಲ್ಲಿ ಬೃಹತ್ ಸಮಾವೇಶ : ಸೌಜನ್ಯ ಕುಟುಂಬ ಭಾಗಿ

ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ನೇತೃತ್ವದಲ್ಲಿ ಉಜಿರೆಯಲ್ಲಿ ಶುಕ್ರವಾರ ಬೃಹತ್ ಸಮಾವೇಶ, ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ ನಡೆಯಿತು.

೨೦೧೨ರ ಅಕ್ಟೋಬರ್ ೧೦ ರಂದು ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಕುಮಾರಿ ಸೌಜನ್ಯಳ ಹತ್ಯೆಯಾಗಿದ್ದು, ಕೊಲೆ ಆರೋಪಿಯ ಪತ್ತೆ ಮಾಡಿ ನ್ಯಾಯ ಒದಗಿಸಬೇಕು ಹಾಗೂ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಬಗ್ಯೆ ಸುಳ್ಳು ವದಂತಿಯನ್ನು ತಡೆಯಬೇಕು ಎಂದು ಒತ್ತಾಯಿಸಿ ಉಜಿರೆಯಲ್ಲಿ ನಡೆದ ಸಮಾವೇಶದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಇಪ್ಪತ್ತೆöÊದು ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸಿದರು.

ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮಾತನಾಡಿ, ಸತ್ಯಮೇವ ಜಯತೇ ಎಂಬ ಮಾತಿನಂತೆ ಸತ್ಯಕ್ಕೆ ಯಾವಾಗಲೂ ಜಯ ಸಿಗುತ್ತದೆ. ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸಿ.ಬಿ.ಐ. ತೀರ್ಪು ಪ್ರಕಟಿಸಿದೆ. ಸಾಕ್ಷಾö್ಯಧಾರದ ಕೊರತೆಯಿಂದ ಶಂಕಿತ ಆರೋಪಿಯನ್ನು ಬಿಡುಗಡೆಗೊಳಿಸಲಾಗಿದೆ. ಸಾರ್ವಜನಿಕರು ಸಾಕ್ಷಾಧಾರಗಳಿದ್ದಲ್ಲಿ ಪೊಲೀಸ್ ಇಲಾಖೆಗೆ ನೀಡಬಹುದು. ಸರ್ಕಾರ ಪ್ರಕರಣದ ಮರುತನಿಖೆ ಮಾಡುವ ಭರವಸೆ ನೀಡಿದೆ. ಆದರೆ ಕೊಲೆ ಪ್ರಕರಣದ ನೆಪದಲ್ಲಿ ದುರುದ್ದೇಶದಿಂದ ಧರ್ಮಸ್ಥಳ ಹಾಗೂ ಹೆಗ್ಗಡೆಯವರ ಬಗ್ಯೆ ಸುಳ್ಳು ವದಂತಿ ಪಸರಿಸುವುದನ್ನು ಅವರು ಖಂಡಿಸಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕೊಲೆ ಆರೋಪಿಯ ಪತ್ತೆಯಾಗಿ ಆತನಿಗೆ ಶಿಕ್ಷೆ ಆಗಬೇಕು. ಧರ್ಮಸ್ಥಳದ ಪಾವಿತ್ರö್ಯತೆಗೆ ಧಕ್ಕೆ ಆಗಬಾರದು. ನಾವೆಲ್ಲರೂ ಹೆಗ್ಗಡೆಯವರ ಜೊತೆಗಿದ್ದು, ಮಾನ್ಯ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಕಾನೂನು ಪ್ರಕಾರ ತನಿಖೆ ನಡೆಸಿ ನ್ಯಾಯ ಒದಗಿಸಿರುವುದಾಗಿ ಭರವಸೆ ನೀಡಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಜಯರಾಜ್ ಹೊಸಕೋಟೆ, ಮೂಡಬಿದ್ರೆಯ ವಕೀಲೆ ಶ್ವೇತಾ ಜೈನ್ ಮಾತನಾಡಿ ಕಾನೂನಾತ್ಮಕ ಹೋರಾಟ ನಡೆಸಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.

ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ ತುಳುವಿನಲ್ಲಿ ಮಾತನಾಡಿ, ಶ್ರೀ ಮಂಜುನಾಥ ಸ್ವಾಮಿಯ ಪ್ರತಿನಿಧಿಯಾಗಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಬಗ್ಯೆ ಸರ್ವಧರ್ಮಿಯರಿಗೂ ಅಪಾರ ಭಕ್ತಿ, ಗೌರವ ಇದೆ. ಸುಳ್ಳು ಆರೋಪ ಮಾಡುವವರಿಗೆ ದೇವರು ಸೂಕ್ತ ಶಿಕ್ಷೆ ನೀಡಲಿ ಎಂದು ಹಾರೈಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಾತನಾಡಿ, ಇದು ಸತ್ಯ ಶೋಧನೆಯ ಸಮಾವೇಶವಾಗಿದೆ. ಇಂದಿನ ಸಮಾವೇಶ ಹೋರಾಟದ ಪ್ರಾರಂಭ ಮಾತ್ರ ಶೀಘ್ರ ಆರೋಪಿ ಪತ್ತೆಯಾಗದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಖಾವಂದರೆ, ನಾವು ನಿಮ್ಮ ಜೊತೆ ಇದ್ದೇವೆ, ನೈಜ ಆರೋಪಿಯ ಪತ್ತೆಯಾಗಿ ಶಿಕ್ಷೆ ಆಗಲಿ ಹಾಗೂ ಧರ್ಮಸ್ಥಳದ ವಿರುದ್ಧ ಸುಳ್ಳು ವದಂತಿ ಹಬ್ಬುವುದು ಕೊನೆಗೊಳ್ಳಲಿ ಎಂದು ಘೋಷಣೆಗಳನ್ನು ಕೂಗುತ್ತಾ ಎಲ್ಲಾ ಸಾರ್ವಜನಿಕರು ಎಸ್.ಡಿ.ಎಂ. ಕಾಲೇಜಿನ ಬಳಿ ಜಾಥಾದಲ್ಲಿ ಸಾಗಿದರು.

ಅಲ್ಲಿ ನಡೆದ ಸಮಾವೇಶದಲ್ಲಿ ಸೌಜನ್ಯ ಕೊಲೆ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷೆ ವಿಧಿಸಬೇಕು. ಧರ್ಮಸ್ಥಳದ ಬಗ್ಗೆ ಸುಳ್ಳು ವದಂತಿ ಹಬ್ಬಿಸುವವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸುವ ಹಕ್ಕೊತ್ತಾಯದ ಪ್ರತಿಯನ್ನು ಶಾಸಕ ಹರೀಶ್ ಪೂಂಜರಿಗೆ ನೀಡಲಾಯಿತು.

ಹಕ್ಕೋತ್ತಾಯ ಸ್ವೀಕರಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ ಕಾನೂನಾತ್ಮಕ ಪ್ರಕ್ರಿಯೆಯೊಂದಿಗೆ ಪ್ರಕರಣದ ತನಿಖೆ ನಡೆಸಿ ಎರಡು ತಿಂಗಳೊಳಗೆ ಕೊಲೆ ಆರೋಪಿಯನ್ನು ಸಮಾಜದ ಮುಂದೆ ಪ್ರಸ್ತುತಪಡಿಸುವುದಾಗಿ ಭರವಸೆ ನೀಡಿದರು. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ನೀಡುವುದಾಗಿ ತಿಳಿಸಿದರು.

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯ ಅಭಯ ಮತ್ತು ಅನುಗ್ರಹದಿಂದ ಆರೋಪಿ ಶೀಘ್ರ ಪತ್ತೆಯಾಗಿ ಆತ ಹುಚ್ಚರಂತೆ ತಿರುಗಾಡಲಿದ್ದಾನೆ ಎಂದು ಹೇಳಿದರು.

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರಿಗೆ ತಕ್ಕ ಶಿಕ್ಷೆ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್ ಕುಮಾರ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೆ. ಅಭಯಚಂದ್ರ ಜೈನ್ ಮಾತನಾಡಿ ನ್ಯಾಯ ಒದಗಿಸುವ ಭರವಸೆ ನೀಡಿದರು.

ಶಾರದಾ ಆರ್. ರೈ ಸ್ವಾಗತಿಸಿದರು. ಡಾ. ಎಲ್.ಎಚ್. ಮಂಜುನಾಥ್ ಧನ್ಯವಾದವಿತ್ತರು.

ಪ್ರತಿಭಟನೆಗೆ ಆಗಮಿಸಿದ ಸೌಜನ್ಯ ತಾಯಿ 

ಎಸ್.ಡಿ.ಎಂ ಕಾಲೇಜಿನ ಎದುರು ಪ್ರತಿಭಟನಾಕಾರರು ಆಗಮಿಸುವ ವೇಳೆ ಸೌಜನ್ಯಳ ತಾಯಿ ಕುಸುಮಾವತಿ ಅವರೂ ಅಲ್ಲಿಗೆ ಆಗಮಿಸಿದ್ದಾರೆ. ಈ ವೇಳೆ ಅಲ್ಲಿ ನೂಕು ನುಗ್ಗಲು ಸಂಭವಿಸಿದೆ. ಕುಸುಮಾವತಿ ಅವರನ್ನು ವೇದಿಕೆ ಬಳಿ ಹೋಗಲು ಪ್ರತಿಭಟನಾ ಕಾರರು ಅವಕಾಶ ನೀಡಲಿಲ್ಲ ಹಾಗೂ ಕುಸುಮಾವತಿ ಅವರನ್ನು ಹಾಗೂ ಅವರೊಂದಿಗೆ ಬಂದ ಮಕ್ಕಳನ್ನು ಹಾಗೂ ಇತರರನ್ನು ಪ್ರತಿಭಟನಾಕಾರರು ತಳ್ಳಾಡಿದ್ದಾರೆ. ಕುಸುಮಾವತಿ ಅವರು ವೇದಿಕೆ ಹತ್ತಲು ಹೋದಾಗ ಅದಕ್ಕೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪೊಲೀಸರು ಅವರನ್ನು ಅಲ್ಲಿಯೇ ತಡೆದರು. ಕೆಲ ಹೊತ್ತು ಇಲ್ಲಿ ಗೊಂದಲದ ವಾತಾವರ ಮುಂದುವರಿಯಿತು. ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ

 

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...