Sunday, October 22, 2023

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್‌

Must read

ವಿಟ್ಲ: ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಿನಿಯರಪಾಲು ನಿವಾಸಿ ಸುಧೀರ್ ಕುಮಾರ್ ಎಂದು ಗುರುತಿಸಲಾಗಿದೆ.

ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ವಾರಂಟ್ ಹೊರಡಿಸಲಾಗಿತ್ತು. ಆದರೆ ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ವಿಟ್ಲ ಪೊಲೀಸ್ ಇನ್ ಸ್ಪೆಕ್ಟರ್ ನಾಗರಾಜ್ ಅವರ ಸೂಚನೆ ಮೇರೆಗೆ, ಎಸ್ಸೆಗಳಾದ ಕಾರ್ತಿಕ್ ಮತ್ತು ವಿದ್ಯಾಕೆ, ಸಿಬ್ಬಂದಿ ಅಡ್ಯನಡ್ಕ ಎಂಬಲ್ಲಿ ಸುಧೀರ್ ಕುಮಾರ್ ನನ್ನು ಬಂಧಿಸಿದ್ದಾರೆ

More articles

Latest article