Wednesday, April 10, 2024

ಬ್ರಿಡ್ಜ್ ಕಾಮಗಾರಿ ಸಾಮಾಗ್ರಿಗಳ ಕಳವು: ಪ್ರಕರಣ ದಾಖಲು

ವಿಟ್ಲ : ಮಾಣಿಯಲ್ಲಿ ಬ್ರಿಡ್ಜ್ ಕೆಲಸಕ್ಕೆ ತಂದಿಟ್ಟಿದ್ದ ರಾಡುಗಳು, ಪ್ಲೇಟ್ಸ್ ಹಾಗೂ ಇತರ ಸಾಮಗ್ರಿಗಳು ಕಳ್ಳತನವಾಗಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಬಿ ಮೂಡ ಗ್ರಾಮದ ನಿವಾಸಿ, ಕೆ.ಎನ್.ಆರ್ ಕನ್ಸ್ಟ್ರಕ್ಷನ್ ಕಂಪೆನಿಯಲ್ಲಿ ಪಿ.ಆರ್.ಒ ಆಗಿ ಕೆಲಸ ನಿರ್ವಹಿಸುತ್ತಿರುವ ಆರ್. ನಂದಕುಮಾರ್ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕು ಮಾಣಿ ಎಂಬಲ್ಲಿ ಬ್ರಿಡ್ಜ್ ಕೆಲಸ ಮಾಡಲು ತಂದು ಇಟ್ಟಿದ್ದ ರಾಡುಗಳು, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳು ಆ.7 ರಂದು ನೋಡಿದಾಗ ಕಳ್ಳತನವಾಗಿದ್ದು, ಸಾಮಾಗ್ರಿಗಳನ್ನು ಹುಡುಕಾಡಿದಾಗ ಮಾಣಿ ಗ್ರಾಮದ ಪಟ್ಲಕೋಡಿ ಎಂಬಲ್ಲಿ ಈಚರ್ ವಾಹನದಲ್ಲಿ ವ್ಯಕ್ತಿಯೋರ್ವ ತುಂಬಿಸಿಕೊಂಡಿರುವುದು ಕಂಡು ಬಂದಿದ್ದು, ನಂದಕುಮಾರ್ ಕಂಡ ಆರೋಪಿ ವಾಹನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿರುತ್ತಾನೆ.

ಕಳ್ಳತನವಾದ ಸಾಮಾಗ್ರಿಗಳು 5 ಟನ್ ಗಳಾಗಿದ್ದು ಅಂದಾಜು ಮೌಲ್ಯ 3,50,000/- ರೂ ಆಗಿರಬಹುದು ಎಂಬುದಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 138/2023 ಕಲಂ: 379 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...