Saturday, April 6, 2024

ವಿಶ್ವ ಹಿಂದೂ ಪರಿಷದ್, ಬಜರಂಗದಳ ವತಿಯಿಂದ ಬೈಠಕ್

ಬಂಟ್ವಾಳ: ಧಾರ್ಮಿಕ ಆಚರಣೆಗಳ ಮೂಲ ಉದ್ದೇಶವನ್ನು ತಿಳಿದುಕೊಂಡು , ಒಳ್ಳೆಯ ದೃಷ್ಟಿಕೋನವನ್ನು ಇಟ್ಟುಕೊಂಡು,ದಾರ್ಮಿತೆಯನ್ನು ಬಿತ್ತುವ,ಸಂಸ್ಕೃತಿಯನ್ನು ಒತ್ತುವ ದೃಷ್ಟಿಯಿಂದ, ಹಿಂದೂ ಸಮಾಜವನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ, ಸಾಮಾಜಿಕ ಒಗ್ಗಟ್ಟು ಆಗುವ ರೀತಿಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬೇಕು ಎಂದು ಆರ್.ಎಸ್.ಎಸ್.ಪ್ರಮುಖ ಡಾ| ಪ್ರಭಾಕರ್ ಭಟ್ ಹೇಳಿದರು.

ಅವರು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ನಾರಾಯಣ ಮಂದಿರದಲ್ಲಿ ವಿಶ್ವಹಿಂದೂ ಪರಿಷದ್ ,ಬಜರಂಗದಳ ವತಿಯಿಂದ ನಡೆದ ಬೈಠಕ್ ನಲ್ಲಿ ಮಾತನಾಡಿದರು. ತಾಲೂಕಿನಲ್ಲಿ ನಡೆಯಲಿರುವ ಶ್ರೀ ಕೃಷ್ಣಜನ್ಮಾಷ್ಟಮಿ, ಗಣೇಶ್ ಚತುರ್ಥಿ ಹಾಗೂ ಶಾರದಾ ಉತ್ಸವಗಳು ಯಾವ ರೀತಿಯಲ್ಲಿ ನಡೆಯಬೇಕು ಎಂಬುದರ ಕುರಿತು ತಾಲೂಕಿನ ವಿವಿಧ ಧಾರ್ಮಿಕ ಸಮಿತಿಗಳ ಪ್ರಮುಖರನ್ನು ಕರೆದು ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಧರ್ಮದ ಸ್ವರೂಪ ಹಾಳಾಗದಂತೆ ಯಾವ ರೀತಿಯಲ್ಲಿ ನಡೆಸಬೇಕು ಎಂಬುದರ ಕುರಿತು ಅವರು ಸಭೆಯಲ್ಲಿ ಮಾತನಾಡಿದರು.

ಪಾಶ್ಚಾತ್ಯ ನೃತ್ಯಗಳು ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೂಡಿಬಂದಾಗ ನಮ್ಮ ಸಂಸ್ಕೃತಿಗಳ ಮೇಲೆ ಭೀಕರ ಪರಿಣಾಮ ಬೀಳುತ್ತದೆ.  ಹಾಗಾಗಿ ಭಜನೆ,ಯಕ್ಷಗಾನ, ಭರತನಾಟ್ಯ ಅಥವಾ ನಮ್ಮ ಸಂಸ್ಕೃತಿ, ಆಚಾರ,ವಿಚಾರಗಳನ್ನು ಬಿಂಬಿಸುವ, ನಮ್ಮ ಪೂರ್ವದ ಇತಿಹಾಸವನ್ನು ಬಿಂಬಿಸುವ ಮುಂದಿನ‌ ಜನಾಂಗದ ಮೇಲೆ ಪ್ರಭಾವ ಬೀರುವ ಮತ್ತು ಸಂಸ್ಕೃತಿಯನ್ನು ಉಳಿಸಿಬೆಳೆಸುವ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಮಾದರಿಯ ನಡೆಯನ್ನು ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.

ಹಿಂದೂ ಸಮಾಜವನ್ನು ಒಂದುಗೂಡಿಸಲು ಹಿರಿಯರು ಮಾಡಿದ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಜಾಗೃತಿಯನ್ನು ಮೂಡಿಸಲು ನಾವು ಎಷ್ಟರಮಟ್ಟಿಗೆ ನ್ಯಾಯಸಮ್ಮತವಾಗಿ ಕೆಲಸ ಮಾಡಿದ್ದೇವೆ ಎಂಬುದರ ಬಗ್ಗೆ ಯೋಚನೆ ಮಾಡಬೇಕಾಗಿದೆ.

ಧಾರ್ಮಿಕ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಇಂತಹ ಕಾರ್ಯಕ್ರಮಗಳ ಮೂಲಕ ನಡೆಯಬೇಕು.  ಧಾರ್ಮಿಕ ಆಚರಣೆಗಳಲ್ಲಿ ಉತ್ತಮ ವಿಚಾರಗಳನ್ನು ನೀಡುವ, ಅಭಿರುಚಿಯನ್ನು ಬೆಳೆಸುವ ಕಾರ್ಯಕ್ರಮವಾಗಿ ಮೂಡಿಬರಬೇಕು.

ಸಾರ್ವಜನಿಕವಾಗಿ ನಡೆಯುವ ಗಣೇಶ್ ಚತುರ್ಥಿ, ಕೃಷ್ಣ ಜನ್ಮಾಷ್ಟಮಿ ಮತ್ತು ಶಾರದ ಉತ್ಸವಕ್ಕೆ ಬರುವ ಭಕ್ತರ ಡ್ರೆಸ್ ಕೋಡ್ ನಲ್ಲಿ ಕೂಡ ಭಾರತೀಯತೆಯ ಎದ್ದುಕಾಣಲಿ ಆದರ ಬದಲಾಗಿ ಪಾಶ್ಚಾತ್ಯ ಸಂಸ್ಕೃತಿಯನ್ನು ಬಿಂಬಿಸುವ ಡ್ರೆಸ್ ಕೋಡ್ ಬಳಕೆಗೆ ಅವಕಾಶ ನೀಡಬಾರದು, ಈ ಬಗ್ಗೆ ಮುಂಚಿತವಾಗಿಯೇ ಸೂಚನೆಯನ್ನು ಸಂಘಟಕರು ನೀಡಬೇಕು ಎಂಬ ವಿಚಾರವನ್ನು ಅವರು ತಿಳಿಸಿದರು.

ವಿಶ್ವ ಹಿಂದೂ ಪರಿಷದ್, ಬಜರಂಗದಳ ಬಂಟ್ವಾಳ ತಾಲೂಕು ಘಟಕಗದ ಅಧ್ಯಕ್ಷ ಪ್ರಸಾದ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...