Sunday, April 7, 2024

ವಿಟ್ಲ ವಲಯ ಬಂಟರ ಕೂಟದ ಆಶ್ರಯದಲ್ಲಿ ಆಟಿಡ್ ಬಂಟೆರೆನ ಕೆಸರ್ಡ್ ಒಂಜಿ ದಿನ

ವಿಟ್ಲ: ವಿಟ್ಲ ವಲಯ ಬಂಟರ ಕೂಟದ ಆಶ್ರಯದಲ್ಲಿ ಪುಣಚ ಗ್ರಾಮದ ಬೈಲುಗುತ್ತು ಗದ್ದೆಯಲ್ಲಿ ‘ಆಟಿಡ್ ಬಂಟೆರೆನ ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಬೈಲುಗುತ್ತು ಸುನಂದಾ ಮಾರಪ್ಪ ಶೆಟ್ಟಿ ಉದ್ಘಾಟಿಸಿದರು. ಬೈಲುಗುತ್ತು ಮುರಳೀಧರ ರೈ ತೆಂಗಿನ ಹೂ ಅರಳಿಸಿದರು.

ವಿಟ್ಲ ಬಂಟರ ಸಂಘದ ಅಧ್ಯಕ್ಷ ದಡ್ಡಂಗಡಿ ಚೆಲ್ಲಡ್ಕ ರಾಧಾಕೃಷ್ಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಬಂಟ ಸಮುದಾಯದ ಅಭಿವೃದ್ಧಿಗೆ ಈ ತನಕ ಯಾವುದೇ ಸರಕಾರ ಮುತುವರ್ಜಿ ವಹಿಸಿಲ್ಲ. ಈ ನಿಟ್ಟಿನಲ್ಲಿ ಬಂಟರ ನಿಗಮ ಸ್ಥಾಪನೆಗೆ ಕಟಿಬದ್ಧನಾಗಿದ್ದೇನೆ. ಬೆಂಗಳೂರಿನಲ್ಲಿ ಕಂಬಳ ಕ್ರೀಡೆ ಆಯೋಜನೆ ಮಾಡುವ ಉದ್ದೇಶವಿದ್ದು, ಕರಾವಳಿಯ ಜಾನಪದ ಕ್ರೀಡೆಗೆ ಹೊಸ ಆಯಾಮ ದೊರೆಯಲಿದೆ ಎಂದ ಅವರು ಬಂಟರೆಲ್ಲರೂ ಸಂಘಟಿತರಾದಾಗ ಸಮಾಜದ ಮಧ್ಯೆ ಬಲಿಷ್ಠ ರಾಗಿ ಮುನ್ನಡೆಯಬಹುದು ಎಂದರು.

ಸಮಾರಂಭದಲ್ಲಿ ಬೈಲುಗುತ್ತು ಯಜಮಾನ ಜಗನ್ನಾಥ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ರೈ ರಂಗೋಲಿ, ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕಲ್ಲಂದಡ್ಕ, ಸಹ ಕೋಶಾಧಿಕಾರಿ ಪ್ರತಿಭಾ ಆತ್ಮರಂಜನ್ ರೈ, ಬೆಂಗಳೂರು ಬಂಟರ ಸಂಘದ ವಿದ್ಯಾರ್ಥಿ ಸಹಾಯ ಸಮಿತಿ ಅಧ್ಯಕ್ಷ ಸದಾನಂದ ಸುಲಾಯ, ವಿಟ್ಲ ಬಂಟರ ಸಂಘದ ಗೌರವಾಧ್ಯಕ್ಷ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಬಂಟರ ಮಾತೃ ಸಂಘದ ಭಾಸ್ಕರ ಶೆಟ್ಟಿ ವಿಟ್ಲ, ವಿಟ್ಲ ಬಂಟರ ಮಹಿಳಾ ಸಂಘದ ಅಧ್ಯಕ್ಷೆ ಲತಾ ಸಿ.ರೈ ಕೊಲ್ಯ, ಯುವ ಬಂಟರ ಸಂಘದ ಅಧ್ಯಕ್ಷ ರಂಜಿತ್ ಶೆಟ್ಟಿ ಗುಬ್ಯ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕೆಸರ್ದ ಗೊಬ್ಬು ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಾಯೀಶ್ವರಿ ಶೆಟ್ಟಿ ಪ್ರಾರ್ಥನೆ ಹಾಡಿದರು. ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಪಡಾರು ಸ್ವಾಗತಿಸಿದರು. ಪುಣಚ ಗ್ರಾಮ ಸಮಿತಿ ಅಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು ವಂದಿಸಿದರು. ಪುಣಚ ಗ್ರಾಮ ಸಮಿತಿ ಕೋಶಾಧಿಕಾರಿ ರವೀಂದ್ರ ಶೆಟ್ಟಿ ದೇವರಗುಂಡಿ ಸಹಕರಿಸಿದರು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...