ವಿಟ್ಲ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆ ಬುಧವಾರ ಜಾರಿಗೊಂಡಿದ್ದು ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಶಾಂತಿ ನಗರ ಅಕ್ಷಯ ಸಮುದಾಯ ಭವನ ಮತ್ತು ಪೊನ್ನೊಟ್ಟು ಶಿವಗಿರಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಪ್ರೊಜೆಕ್ಟರ್ ಪರದೆ ಪ್ರದರ್ಶನ ನಡೆಯಿತು.
ಪೊನ್ನೊಟ್ಟು ಶಿವಗಿರಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿಟ್ಲ ಯೋಜನಾಧಿಕಾರಿ ಉಷಾ ಉದ್ಘಾಟಿಸಿದರು.
ಸಮಾರಂಭದಲ್ಲಿ ಬಂಟ್ವಾಳ ತಹಸೀಲ್ದಾರ್ ರವಿ ಕೂಡ್ಲಿಗಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಗೋಪಾಲ ನಾಯ್ಕ್, ಪಟ್ಟಣ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಸದಸ್ಯರು, ಕಾಂಗ್ರೆಸ್ ಮುಖಂಡರು, ಫಲಾನುಭವಿಗಳು ಉಪಸ್ಥಿತರಿದ್ದರು.