Thursday, April 18, 2024

ಇನೋವಾ ಕಾರು – ಬೈಕ್‌ ನಡುವೆ ಅಪಘಾತ : ಬೈಕ್‌ ಸವಾರ ಸಾವು

ಬೆಳ್ತಂಗಡಿ: ಇನೋವಾ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ಸಂಭವಿಸಿದೆ.

ಬೈಕ್‌ ಸವಾರ ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್‌ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿಯಾದ ರಭಸಕ್ಕೆ ಬೈಕ್‌ ಸವಾರ ಸುಧೀರ್‌ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...