Thursday, April 11, 2024

ನಿಲ್ಲಿಸಿದ್ದ ಲಾರಿ ಮುಂದೆ ಸಾಗಿ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಹಾಗೂ ಶಿಕ್ಷಕಿಗೆ ಡಿಕ್ಕಿ

ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಮೆಲ್ಕಾರ್ ಎಂಬಲ್ಲಿ ನಡೆದಿದೆ.

ವಿದ್ಯಾರ್ಥಿನಿ ಹಜ್ರಾ ಶಾಮ (20) ಹಾಗೂ ಖತೀಜಾತುಲ್ (18) ಗಾಯಗೊಂಡವರು.

ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿಯೊಂದು ಮೆಲ್ಕಾರ್ ನಲ್ಲಿ ಅಪಘಾತಕ್ಕೆ ಕಾರಣವಾಗಿದೆ.

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ಎಂಬಲ್ಲಿ ‌ ಸರ್ವೀ್ ರಸ್ತೆಯಲ್ಲಿ ಮಧ್ಯಾಹ್ನ ಕೆ.ಎನ್.ಆರ್

ಸಿ.ಕಂಪೆನಿಗೆ ಸೇರಿದ ಲಾರಿಯ ಚಾಲಕ ರಸ್ತೆಯಲ್ಲಿ ‌ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ.

ಆದರೆ ಹ್ಯಾಂಡ್ ಬ್ರೇಕ್ ‌ಹಾಕದ ಕಾರಣ ಲಾರಿ ಮುಂದೆ ಚಲಿಸಿದ್ದು , ಅಲ್ಲಿಯೇ ಇದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಮುಂದೆ ಸಾಗಿದ ಲಾರಿ ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಗೆ ವಾಲಿ ನಿಂತಿದೆ. ಡಿಕ್ಕಿಹೊಡೆದ ಪರಿಣಾಮ ಅವರಿಬ್ಬರೂ ರಸ್ತೆ ಬದಿಯಲ್ಲಿರುವ ನೀರು ಹೋಗುವ ಸಣ್ಣ ಕಣಿಗೆ ಬಿದ್ದಿದ್ದಾರೆ. ಇಬ್ಬರಿಗೂ ಗಾಯವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕ ಆನಂದ ಪಾಸ್ವಾನ್ ರವರ ನಿರ್ಲಕ್ಷ್ಯ ತನವೇ ಕಾರಣ ಎಂದು ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...