Thursday, April 18, 2024

ಕಾರು-ಬೈಕ್ ಢಿಕ್ಕಿ: ಯುವತಿ ಮೃತ್ಯು

ಮುಲ್ಕಿ: ಕಾರು ಢಿಕ್ಕಿಯಾಗಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ.

ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ ಎಂದು ಗುರುತಿಸಲಾಗಿದ್ದು ಗಾಯಾಳು ಬೈಕ್ ಸವಾರನನ್ನು ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬೈಕ್ ನ್ನು ಕಾರು ದೂಡಿಕೊಂಡು ಹೋಗಿದ್ದು ಬೈಕ್ ಹಿಂಭಾಗದಲ್ಲಿ ಕುಳಿತುಕೊಂಡಿದ್ದ ಸಹಸವಾರೆ ಪ್ರೀತಿಕಾ ಶೆಟ್ಟಿ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...