Saturday, April 6, 2024

ಬೆಂಗಳೂರಿನಲ್ಲಿ ಅಪಘಾತ : ಮಂಗಳೂರಿನ ಯುವಕ ಮೃತ್ಯು

ಮಂಗಳೂರು: ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಕುದ್ರೋಳಿಯ ಯುವಕ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕುದ್ರೋಳಿಯ ಮೊಯ್ದಿನ್ ನಗರದ ಝಹೂ‌-ನಸೀರಾ ದಂಪತಿಯ ಪುತ್ರ ನಾಹಿದ್ ಸಫಾನ್ ಮೃತಪಟ್ಟವರಾಗಿದ್ದಾರೆ.

ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಯಲಹಂಕದ ನೆಹರೂ ನಗರದಲ್ಲಿ ವಾಸವಾಗಿದ್ದ ಇವರು ತನ್ನ ಸ್ಕೂಟರ್‌ನಲ್ಲಿ ಯಲಹಂಕದಿಂದ ಬೆಂಗಳೂರು ಕಡೆಗೆ ಸರ್ವಿಸ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಯಲಹಂಕ ಬಿಬಿ ರಸ್ತೆಯ ಏರೋ ಡ್ರಂ ಬಳಿ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಒಂದುವರೆ ವರ್ಷದ ಹಿಂದೆ ವಿವಾಹವಾಗಿದ್ದ ನಾಹಿದ್ ಸಫಾನ್ ತಂದೆ ಮತ್ತು ತಾಯಿ ಹಾಗೂ ಅಣ್ಣ ಅಕ್ಕ ಪತ್ನಿಯನ್ನು ಅಗಲಿದ್ದಾರೆ.

 

More from the blog

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...