Thursday, October 19, 2023

ಲೊರೆಟ್ಟೋ ಮಾತಾ ಚರ್ಚ್ ನಲ್ಲಿ ತೆನೆ ಹಬ್ಬ

Must read

ಲೊರೆಟ್ಟೊ ಮಾತಾ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್ ) ತೆನೆಹಬ್ಬ ವನ್ನು ಭಕ್ತಿ ಪೂರ್ವಕವಾಗಿ ವಿಜ್ರಂಭಣೆಯಿಂದ ಆಚರಿಸಲಾಯಿತು.

ಚರ್ಚ್ ಧರ್ಮಗುರುಗಳಾದ ವ. ಫ್ರಾನ್ಸಿಸ್ ಕ್ರಾಸ್ತ , ಲೋರೆಟ್ಟೋ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ. ಜೇಸನ್ ಮೋನಿಸ್ ಪ್ರಧಾನ ಧರ್ಮಗುರುಗಳಾಗಿ ಹಾಗೂ ವಂ ಪ್ರತಾಪ್ ನಾಯಕ್ ಬಲಿಪೂಜೆಯನ್ನು ಅರ್ಪಿಸಿದರು.

ಚರ್ಚ್ ಧರ್ಮಗುರುಗಳು ದೆವರವಾಕ್ಯದ ಸಂದೇಶದಲ್ಲಿ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ತ್ಯಾಗಮಯ ಜೀವನದ ಬಗ್ಗೆ ಅರ್ಥ ಪೂರ್ಣ ಪ್ರವಚನ ನೀಡಿದರು. ಪೂಜೆಯಲ್ಲಿ ಮಕ್ಕಳು,ಭಕ್ತಾದಿಗಳು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.

ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ ಎಲ್ಲಾರೂ ಪಾಲ್ಗೊಳ್ಳಲುಚರ್ಚ್ ವಠಾರದಲ್ಲಿ ಎಲ್ ಇ ಡಿ ಪರದೆಯನ್ನು ಅಳವಡಿಸಲಾಗಿತ್ತು. ಕಳೆದ 9 ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು ಹಾಗೆ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು . ವಿವಿಧಬಗೆಯ ಹೂಗಳನ್ನು ತಂದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು. ಬಲಿ ಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಉಪಹಾರ , ಹಾಗೂ ಕಬ್ಬನ್ನು ನೀಡಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. ಚರ್ಚ್ ಪಾಲನಾ ಮಂಡಳಿ ನೇತೃತ್ವ ವಹಿಸಿದ್ದರು. ಧರ್ಮಗುರುಗಳು ಇಂದಿನ ಸಮಾರಂಭಕ್ಕೆ ಸಹಕರಿಸಿದ ಎಲ್ಲರನ್ನೂ ಧರ್ಮ ಗುರುಗಳು ಸ್ಮರಿಸಿ, ವಂದಿಸಿದರು.

More articles

Latest article