Thursday, October 19, 2023

ಬಡಗಕಜೆಕಾರ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಅಭಿನಂದನೆ

Must read

ಬಡಗಕಜೆಕಾರ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಗೌರವ ಅಭಿನಂದನೆ ಸಲ್ಲಿಸಿದ್ದಾರೆ.

ಬಂಟ್ವಾಳ ತಾಲೂಕು ಬಡಗಕಜೆಕಾರ್ ಗ್ರಾಮ ಪಂಚಾಯತಿಯ 16-1-2021 ರಿಂದ 30 ತಿಂಗಳುಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅಸ್ಮ ಹಾಗೂ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಡೀಕಯ್ಯ ಬಂಗೇರ ಮತ್ತು ಬಡಗ ಕಜೆಕಾರ್ ಅಂಗನವಾಡಿ ಕೇಂದ್ರದಿಂದ ವರ್ಗಾವಣೆಗೊಂಡ ಕುಸುಮಾವತಿ, ತೆಂಕಕಜೆಕಾರು ಅಂಗನವಾಡಿ ಕೇಂದ್ರದಿಂದ ವರ್ಗಾವಣೆಗೊಂಡ ಭಾರತಿ ಇವರುಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸದಸ್ಯರುಗಳು ಸಿಬ್ಬಂದಿ ವರ್ಗ ಗ್ರಾಮಕರಣಿಕರು ಉಪಸ್ಥಿತರಿದ್ದರು.

More articles

Latest article