Friday, April 12, 2024

ಇನ್ಮುಂದೆ ಸಿಎಂ ಅನುಮೋದನೆ ಇಲ್ಲದೆ ಯಾವುದೇ ವರ್ಗಾವಣೆ ಮಾಡುವಂತಿಲ್ಲ- ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಇನ್ಮುಂದೆ ನನ್ನ ಅನುಮತಿ ಇಲ್ಲದೆ ಯಾವುದೇ ವರ್ಗಾವಣೆ ಮಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪರ ಆದೇಶ ಹೊರಡಿಸಿರೋ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಯಾವುದೇ ಇಲಾಖೆಯೂ ಮುಖ್ಯಮಂತ್ರಿಗಳ ಅನುಮೋದನೆ ಇಲ್ಲದೆ ವರ್ಗಾವಣೆ ಮಾಡಬಾರದು. ಅದು ಅವಧಿಪೂರ್ವ ವರ್ಗಾವಣೆ ಆಗಿರಲಿ, ಸಾಮಾನ್ಯ ವರ್ಗಾವಣೆ ಆಗಿರಲಿ, ಯಾವುದೇ ಮಾಡುವಂತಿಲ್ಲ. ಸರ್ಕಾರಿ ನೌಕರರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ, ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ವರ್ಗಾಯಿಸೋ ಮುನ್ನ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಿಎಂ ಗಮನಕ್ಕೆ ತಂದು ಅನುಮೋದನೆ ಪಡೆಯಬೇಕು ಎಂದು ಬರೆದಿದ್ದಾರೆ.

ಇನ್ನು, ಒಂದು ವೇಳೆ ಸಿಎಂ ಗಮನಕ್ಕೆ ಬಾರದೆ ವರ್ಗಾವಣೆ ಆದಲ್ಲಿ ಅದಕ್ಕೆ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರೇ ಹೊಣೆಗಾರರಾಗಲಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...