ಬಂಟ್ವಾಳ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ದೂರಿನ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದರ ಸತ್ಯಾಸತ್ಯತೆಯ ಬಗ್ಗೆ ತನಿಖೆ ಮುಂದುವರಿದಿದೆ.
ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ನಾವೂರ ಸಮೀಪದ ಮೈಂದಾಳ ನಿವಾಸಿ ನಿಸಾರ್ ಎಂಬವರ ಮೇಲೆ ಅಪರಿಚಿತ ವ್ಯಕ್ತಿಗಳು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ
ಸೆ. 9 ರಂದು ರಾತ್ರಿ ಸುಮಾರು 9.45 ಗಂಟೆ ಸುಮಾರಿಗೆ ಅಜ್ಜಿಮನೆಯಿಂದ ನಿಸಾರ್ ಅವರು ರಸ್ತೆ ಬದಿ ನಡೆದುಕೊಂಡು ಬರುತ್ತಿದ್ದ ವೇಳೆ ಮೈಂದಾಳ ಸೇತುವೆ ಬಳಿ ಗುರಿಮಜಲು ಎಂಬಲ್ಲಿಗಡ ತಲುಪಿದಾಗ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ವ್ಯಕ್ತಿಗಳು ನಿಸಾರ್ ಅವರನ್ನು ಅಡ್ಡ ಗಟ್ಟಿ ಕೈ ಯಿಂದ ಹಲ್ಲೆ ನಡೆಸಿದ್ದಾರೆ.
ಅದೇ ಸಂದರ್ಭದಲ್ಲಿ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರು ವ್ಯಕ್ತಿಗಳ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆದರೆ ನಿಸಾರ್ ಅವರ ಕೈ ಯಿಂದ ತಪ್ಪಿಸಿ ಓಡಿ ಹೋಗಿದ್ದು ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಈ ಬಗ್ಗೆ ಪೋಲೀಸರು ಅಲ್ಲಿನ ಸಿ.ಸಿ.ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದು,ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.
ಸದ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.