Monday, April 15, 2024

ಇಂಡೋನೇಷ್ಯಾದ‌ ಜಕಾರ್ತದಲ್ಲಿ ನಡೆಯುವ ಹತ್ತನೇ ಅಂತರಾಷ್ಟ್ರೀಯ ಶಿಟೋ-ರಿಯೊ ಚಾಂಪಿಯನ್ಶಿಪ್ ಗೆ ಶುಭಂ ಎಸ್ ಅಂಚನ್ ಮತ್ತು ಅರ್ಜುನ್ ದಿನೇಶ್ ಆಯ್ಕೆ

ಇಂಡೋನೇಷ್ಯಾದ‌ ಜಕಾರ್ತದಲ್ಲಿ ನಡೆಯಲಿರುವ ಹತ್ತನೆ ಅಂತರಾಷ್ಟ್ರೀಯ ಶಿಟೋ-ರಿಯೊ ಚಾಂಪಿಯನ್ಶಿಪ್ ಗೆ 21 ವರ್ಷ -75KG ಕೆ.ಜಿ ವಿಭಾಗದಲ್ಲಿ ಶುಭಂ ಎಸ್ ಅಂಚನ್ ಮತ್ತು 17 ವರ್ಷದ -55 ಕೆ.ಜಿ ಅರ್ಜುನ್ ದಿನೇಶ್(Nitte education trust ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ) ಆಯ್ಕೆಯಾಗಿದ್ದು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಆಯ್ಕೆಯಾದ ವಿಧ್ಯಾರ್ಥಿಗಳಿಗೆ ಕರಾಟೆ ಮೇಲ್ವಿಚಾರಕರು ಮತ್ತು ದಕ್ಷಿಣಕನ್ನಡ ಕರಾಟೆ ಅಸೋಸಿಯೇಷನ್ನ ಟೆಕ್ನಿಕಲ್ ಡೈರೆಕ್ಟರ್ ಆದ ವಿಕ್ಟರ್‌ ಡಿಸೋಜ ಇವರು ತರಬೇತಿ ನೀಡಿರುತ್ತಾರೆ,ಈ ವಿಷಯವಾಗಿ ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ದಕ್ಷಿಣಕನ್ನಡ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಈಶ್ವರ್ ಕಟೀಲ್ ರವರು ಸುದ್ದಿಗೋಷ್ಠಿ ನಡೆಸಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ವಿಧ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿ ಖುಷಿ ವ್ಯಕ್ತಪಡಿಸಿದರು ಮತ್ತು ನಿಟ್ಟೆ ಶಂಕರ್ ಆಡ್ಯಂತಾಯ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ Dr.ನವೀನ್ ಶೆಟ್ಟಿ ಕೆ ಉಪಸ್ಥಿತರಿದ್ದರು

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...