Tuesday, April 16, 2024

ಬಂಟ್ವಾಳ ಗ್ರಾಮಾಂತರ ಪೊಲೀಸರಿಂದ ಮಾನವೀಯ ಕೆಲಸ ….. ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಗೆ ಧನಸಹಾಯ…..

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಔಷಧೀಯ ಖರ್ಚಿಗಾಗಿ ಬಂಟ್ವಾಳ ಗ್ರಾಮಾಂತರು ಪೊಲೀಸರಿಂದ ಧನ ಸಹಾಯ ಮಾಡಿದ ವರದಿಯಾಗಿದೆ.

ಠಾಣೆಯ ಕೆಲಸಕ್ಕಾಗಿ ಬರುತ್ತಿದ್ದ ವನಿತಾ ಎಂಬ ಮಹಿಳೆಗೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ನೇತ್ರತ್ವದಲ್ಲಿ ಸುಮಾರು 27000 ಸಾವಿರ ನಗದು ಹಣವನ್ನು ನೀಡಿದ್ದಾರೆ.

ಬಂಟ್ವಾಳ ಪೇಟೆ ನಿವಾಸಿಯಾಗಿರುವ ವನಿತ ಅವರು ತೀರಾ ಬಡತನದ ಕುಟುಂಬದಲ್ಲಿ ಜೀವನ ಮಾಡುವವರು. ಅವರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಶುಚಿತ್ವದ ಕೆಲಸಕ್ಕಾಗಿ ಬರುತ್ತಿದ್ದರು.

ಆದರೆ ಇತ್ತೀಚೆಗೆ ಮನೆಯ ಸಮೀಪ ಬಿದ್ದ ಕೈಯ ಮೂಳೆ ಮುರಿತಕ್ಕೆ ಒಳಗಾಗಿ ಕೆಲಸಕ್ಕೆ ಬರಲು ಅಸಾಧ್ಯವಾಗಿತ್ತು.

ತೀರಾ ಬಡತನದಲ್ಲಿರುವ ವನಿತಾ ಅವರಿಗೆ ಕೆಲಸ ಮಾಡಿದರೆ ಮೂರು ಹೊತ್ತು ಊಟ ಎಂಬ ಪರಿಸ್ಥಿತಿ .ಹಾಗಾಗಿ ಕಳೆದ ಕೆಲವು ತಿಂಗಳ ಕಾಲ ದುಡಿಮೆ ಇಲ್ಲದೆ ಕಷ್ಟದ ಸ್ಥಿತಿಯಲ್ಲಿರುವ ವಿಚಾರ ಪೋಲೀಸರ ಗಮನಕ್ಕೆ ಬಂದಿತು.

ಇವರ ಕಷ್ಟವನ್ನು ತಿಳಿದ ಬಂಟ್ವಾಳ ಪೋಲೀಸರು ವನಿತಾ ಅವರ ಮನೆಯ ಖರ್ಚಿಗಾಗಿ ಠಾಣೆಯಲ್ಲಿ ಸಿಬ್ಬಂದಿಗಳಿಂದ ಒಟ್ಟುಗೂಡಿಸಿದ ನಗದು ಹಣವನ್ನು ಅವರಿಗೆ ಹಸ್ತಾಂತರ ಮಾಡಿದರು.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...