Saturday, April 6, 2024

ಬಂಟ್ವಾಳ ಯೋಜನೆಯ ಕುದ್ರೆಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಸಪ್ತಾಹ, ಸ್ವಸ್ತ ಬಾಲಕ ಸ್ಪರ್ಧೆ, ಕಿಶೋರಿಯರಿಗೆ ರಕ್ತಹೀನತೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಬಂಟ್ವಾಳ ಯೋಜನೆಯ ಕುದ್ರೆಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಕುದ್ರೆಬೆಟ್ಟು,ಪೂರ್ಲಿಪಾಡಿ,ಹಾಗೂ ಕಂಠಿಕ ಅಂಗನವಾಡಿ ಕೇಂದ್ರಗಳ ಸಹಯೋಗದೊಂದಿಗೆ ಪೋಷಣ ಅಭಿಯಾನದ ಅಂಗವಾಗಿ ಪೌಷ್ಟಿಕ ಸಪ್ತಾಹ, ಸ್ವಸ್ತ ಬಾಲಕ ಸ್ಪರ್ಧೆ, ಕಿಶೋರಿಯರಿಗೆ ರಕ್ತಹೀನತೆ ಬಗ್ಗೆ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ. ಕೆ ಅಣ್ಣು ಪೂಜಾರಿ ಇವರು ಅಧ್ಯಕ್ಷತೆ ವಹಿಸಿದ್ದರು.

ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾವತಿ ಪ್ರಾಸ್ತಾವಿಕವಾಗಿ ಮಾತನಾಡಿ ಪೋಷಣ್ ಮಾಸಾಚರಣೆಯ ಬಗ್ಗೆ, ಇಲಾಖಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು, ಬಾಲ್ತಿಲ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರು ಸ್ವಸ್ತ ಬಾಲಕ ಸ್ಪರ್ಧೆ ನಡೆಸಿಕೊಟ್ಟು, ರಕ್ತಹೀನತೆ ಬಗ್ಗೆ ಕೂಡಾ ಮಾಹಿತಿ ನೀಡಿದರು. ಕುದ್ರೆಬೆಟ್ಟು ಶಾಲಾ ಮುಖ್ಯ ಶಿಕ್ಷಕರು, ಗ್ರಾಮ ಪಂಚಾಯತ್ ಸದಸ್ಯರು, ಬಾಲವಿಕಾಸ ಸಮಿತಿ ಅಧ್ಯಕ್ಷ, ಮಣಿಕಂಠ ಭಜನಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ರಮೇಶ್, ಸ್ತ್ರೀ ಶಕ್ತಿ ಸದಸ್ಯರು, ಪೋಷಕರು, ಮಕ್ಕಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು. ಕಾರ್ಯಕರ್ತೆ ಉಮಾವತಿ ಸ್ವಾಗತಿಸಿ, ವಲಯ ಮೇಲ್ವಿಚಾರಕಿ ಲೀಲಾವತಿ ಕಾರ್ಯಕ್ರಮ ನಿರೂಪಿಸಿ, ಕಾರ್ಯಕರ್ತೆ ಸುರೇಖಾ ವಂದಿಸಿದರು.

More from the blog

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...