Sunday, April 7, 2024

ಕೃಷಿ ಸಖಿಯರಿಗೆ ಎರಡು ದಿನಗಳ ಕಾಲ ಜೇನು ಸಾಕಣಿಕೆ ತರಬೇತಿ ಕಾರ್ಯಕ್ರಮ

ಬಂಟ್ವಾಳ: ತೋಟಗಾರಿಕೆ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಪಂಚಾಯತ್ ಬಂಟ್ವಾಳ ಇವರ ಜಂಟಿ‌ ಆಶ್ರಯದಲ್ಲಿ ತಾಲೂಕಿನ ಕೃಷಿ ಸಖಿಯರಿಗೆ ಎರಡು ದಿನಗಳ ಕಾಲ ಜೇನು ಸಾಕಣಿಕೆ ತರಬೇತಿ ಕಾರ್ಯಕ್ರಮ ಬಿಸಿರೋಡಿನ ತಾ.ಪಂ.ನ ಎಸ್.ಜಿ.ಸಭಾಂಗಣದಲ್ಲಿ ಸೆ.25 ರಂದು ಸೋಮವಾರ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ತಾ.ಪಂ.ಸಹಾಯಕ ನಿರ್ದೇಶಕ ದಿನೇಶ್ ಅವರು ಮಾತನಾಡಿ, ಇಲಾಖೆಯಲ್ಲಿ ಸಬ್ಸಿಡಿ ರೂಪದಲ್ಲಿ ಜೇನು ಕೃಷಿ ಮಾಡಲು ಅವಕಾಶವಿದ್ದು, ಮಹಿಳೆಯರು ಹೆಚ್ಚು ಹೆಚ್ಚು ಕೃಷಿಯಲ್ಲಿ ತೊಡಗಿಸಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಜೇನು ಕೃಷಿ ಜೀವನದ ಒಂದು ಭಾಗವಾಗಿದ್ದು, ಜೇನು ಕೃಷಿಯನ್ನು ಉತ್ತಮ‌ ಆದಾಯದ ವೃತ್ತಿಯಾಗಿ ಸ್ವೀಕರಿಸಬಹುದು. ವ್ಯಕ್ತಿಯ ಯಶಸ್ವಿಗೆ ಶ್ರಮ,ಸ್ಥಿರತೆ ಅಗತ್ಯವಿದೆ. ಯಾವುದೇ ಉದ್ಯೋಗ ,ಉದ್ಯಮದಲ್ಲಿ ಸಾಧಿಸಲು ಆತ್ಮವಿಶ್ವಾಸ ಅತೀ ಮುಖ್ಯ, ಜೀವನದ ಒಂದು ಭಾಗವಾಗಿ ಹೊಂದಿಸಿಕೊಂಡು ಸಮಯ ನೀಡಬೇಕು ಎಂದು ಅವರು ತಿಳಿಸಿದರು.

ಕೃಷಿ ಸಖಿಯರಿಗೆ ಈ ತರಬೇತಿ ನೀಡಿದಾಗ ಅವರು ಗ್ರಾಮೀಣ ಭಾಗದ ಜನರಿಗೆ ಮಾಹಿತಿ ನೀಡುವ ಸುಲಭವಾಗುತ್ತದೆ ಮತ್ತು ಈ ಯೋಜನೆ ,ಯೋಚನೆ ಯಶಸ್ವಿಯಾಗ ಬಹುದು ಎಂಬ ವಿಶ್ವಾಸದೊಂದಿಗೆ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದು ಅವರು ತಿಳಿಸಿದರು.

ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರದೀಪ್ ಡಿ.ಸೋಜ ಮಾತನಾಡಿ, ಕೃಷಿ ಇಲಾಖೆಯ ಮೂಲಕ ಜೇನು ಕೃಷಿಯನ್ನು ಯಾವ ರೀತಿ ಮಾಡಬಹುದು ಎಂಬ ವಿಚಾರಗಳನ್ನು ಸಂಕ್ಷಿಪ್ತವಾಗಿ ತಿಳಿಸಿದರು.

ಬಳಿಕ ಜೇನುನೊಣಗಳ ಮತ್ತು ಸಾಕಣೆ ಯ ಬಗ್ಗೆ ಮಾಹಿತಿ ನೀಡಿದರು. ಸಹಾಯಕ ತೋಟಗಾರಿಕಾ ನಿರ್ದೇಶಕ ಮಂಜುನಾಥ್ , ಸಂಪನ್ಮೂಲ ವ್ಯಕ್ತಿ ಗಳಾದ ಲಕ್ಷಣ್ ಗೌಡ ಮತ್ತು ರಾಧಕೃಷ್ಣ ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ತಾಲೂಕು ವ್ಯವಸ್ಥಾಪಕಿ ಸುಧಾ ಸ್ವಾಗತಿಸಿ ,ವಂದಿಸಿದರು. ವಲಯ ಮೇಲ್ವಿಚಾರಕಿ ದೀಕ್ಷಿತ ನಿರೂಪಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...