Sunday, October 22, 2023

ಬಂಟ್ವಾಳ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಒಕ್ಕೂಟದ ವತಿಯಿಂದ ಬೀಳ್ಕೋಡುಗೆ ಕಾರ್ಯಕ್ರಮ

Must read

ವಿಟ್ಲಪಡ್ನೂರು ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತ ರಾದ ಲಕ್ಮೀಶ ರೈ, ಪೆರುವಾಯಿ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತ ರಾದ ಶೇಖರ ಪೂಜಾರಿ ಅವರ ಬೀಳ್ಕೋಡುಗೆ ಕಾರ್ಯಕ್ರಮ ಬಂಟ್ವಾಳ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಒಕ್ಕೂಟದ ವತಿಯಿಂದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಬಿಸಿರೋಡಿನ ಶಾಖೆಯ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಕೇಂದ್ರ ಬ್ಯಾಂಕಿನ ನಿರ್ದೇಶಕ ಟಿ.ರಾಜಾರಾಮ್ ಭಟ್ ಅವರ ಅಧ್ಯಕ್ಷ ತೆಯಲ್ಲಿ ನಡೆಯಿತು.

ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುದೀರ್ ಕುಮಾರ್ ಜೆ. ಜಿಲ್ಲಾ ಕೇಂದ್ರ ಬ್ಯಾಂಕ್ ನ ಡಿ.ಜಿ.ಎಮ್.ಶರ್ಮಿಳಾ ಗಡಿಯಾರ್, ಸಹಕಾರ ಸಂಘಗಳ ಸಹಕಾರಿ ಅಭಿವೃದ್ಧಿ ಅಧಿಕಾರಿ ಗೋಪಾಲ, ಬಿಸಿರೋಡು ಶಾಖಾ ವ್ಯವಸ್ಥಾಪಕ ಗಣೇಶ್ ಕಾರಂತ,ವಲಯ ಮೇಲ್ವಿಚಾರಕರಾದ ಕೇಶವ ಕಿಣಿ, ಯೋಗೀಶ್ ,ಒಕ್ಕೂಟದ ಅಧ್ಯಕ್ಷ ಸುಧಾಕರ ಶೆಟ್ಟಿ, ಕಾರ್ಯದರ್ಶಿ ಈಶ್ವರ ನಾಯ್ಕ, ಉಪಾಧ್ಯಕ್ಷ ಅಲ್ಬರ್ಟ್ ಡಿ.ಸೋಜ ಉಪಸ್ಥಿತರಿದ್ದರು

More articles

Latest article