Saturday, October 21, 2023

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 169ನೇ ಜನ್ಮ ದಿನಾಚರಣೆ

Must read

ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 169ನೇ ಜನ್ಮ ದಿನಾಚರಣೆಯು ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ನಾರಾಯಣ ಗುರುಗಳು ಶಿಕ್ಷಣಕ್ಕೆ ಮಹತ್ವ ನೀಡಿ ಆಧ್ಯಾತ್ಮಿಕತೆ, ಜ್ಞಾನ ಸಂಪಾದನೆಯ ಮೂಲಕ ಸಾಧನೆಗೆ ಪ್ರೇರಣೆ ನೀಡಿದ್ದು, ಅವರ ಕಾಲಘಟ್ಟದ ಜಾತಿ ವ್ಯವಸ್ಥೆಯನ್ನು ಊಹಿಸುವುದು ಕೂಡ ಅಸಾಧ್ಯ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಮಾತನಾಡಿ, ನಾರಾಯಣ ಗುರುಗಳ ಆದರ್ಶದಂತೆ ಜಾತಿಯ ಬೇಧವಿಲ್ಲದೆ ನಾವೆಲ್ಲರೂ ನಾಡನ್ನು ಕಟ್ಟಬೇಕಿದೆ ಎಂದರು. ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ನಟ ಅರವಿಂದ ಬೋಳಾರ್‌ರನ್ನು ಸನ್ಮಾನಿಸಲಾಯಿತು.

ಗ್ರಾ.ಪಂ.ಗಳಿಗೆ ನೂತನವಾಗಿ ಆಯ್ಕೆಯಾದ ಬಿಲ್ಲವ ಸಮಾಜದ ಅಧ್ಯಕ್ಷರು- ಉಪಾಧ್ಯಕ್ಷರನ್ನು ಗೌರವಿಸಲಾಯಿತು. ಬೆಂಗಳೂರು ಸಿಬಿಐನ ಸೀನಿಯರ್ ಪಬ್ಲಿಕ್ ಪ್ರಾಸಿಕ್ಯೂಟರ್ ಶಿವಾನಂದ ಪೆರ್ಲ ಉಪನ್ಯಾಸ ನೀಡಿದರು. ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಪ್ರಸ್ತಾವನೆಗೈದರು.

ವೇದಿಕೆಯಲ್ಲಿ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮಹೇಶ್‌ಕುಮಾರ್, ಸಂಘದ ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಕೋಶಾಽಕಾರಿ ಆನಂದ ಸಾಲಿಯಾನ್ ಶಂಭೂರು, ಜತೆ ಕಾರ್ಯದರ್ಶಿ ರಾಜೇಶ್ ಸುವರ್ಣ ಮಿತ್ತಬೈಲು, ಮಹಿಳಾ ಬಿಲ್ಲವ ಸಂಘದ ಅಧ್ಯಕ್ಷೆ ಶೈಲಜಾ ರಾಜೇಶ್, ಯುವವಾಹಿನಿ ತಾಲೂಕು ಘಟಕದ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ವಿವಿಧ ಬಿಲ್ಲವ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.

ಪ್ರೇಮನಾಥ್ ಕೆ. ಅವರು ವಿದ್ಯಾರ್ಥಿಗಳ ವಿವರ ನೀಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಎಂ.ತುಂಬೆ ಸ್ವಾಗತಿಸಿದರು. ಲೆಕ್ಕಪರಿಶೋಧಕ ಹೇಮಂತ್ ಕುಮಾರ್ ಮೂರ್ಜೆ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು.

More articles

Latest article