Wednesday, April 17, 2024

ಸೆ.11ರಂದು 2022-23 ನೇ ಸಾಲಿನ ತಾಲೂಕು ಪಂಚಾಯತಿ ಮತ್ತು ವಿವಿಧ ಇಲಾಖೆಗಳಲ್ಲಿನ ಜಮಾ ಖರ್ಚಿನ ಬಗ್ಗೆ ಜಮಾಬಂದಿ ಕಾರ್ಯಕ್ರಮ

2022-23 ನೇ ಸಾಲಿನ ತಾಲೂಕು ಪಂಚಾಯತಿ ಮತ್ತು ವಿವಿಧ ಇಲಾಖೆಗಳಲ್ಲಿನ ಜಮಾ ಖರ್ಚಿನ ಬಗ್ಗೆ ಸಾರ್ವಜನಿಕರ ಸಮ್ಮುಖದಲ್ಲಿ ಜಮಾಬಂದಿ ಕಾರ್ಯಕ್ರಮ ಸೆ.11ರಂದು ಬಂಟ್ವಾಳ ತಾಲೂಕು ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ.

ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಜನತೆಯ ಪಾಲ್ಗೊಳ್ಳುವಿಕೆಯನ್ನು ಖಾತರಿಪಡಿಸಿಕೊಳ್ಳುವುದು ಮತ್ತು ಪ್ರೋತ್ಸಾಹಿಸುವುದು, ಪಾರದರ್ಶಕತೆ ಒದಗಿಸುವುದು ಮತ್ತು ನಾಗರಿಕರಿಗೆ ಮಾಹಿತಿ ದೊರಕುವಂತೆ ಮಾಡುವುದು, ಸಾರ್ವಜನಿಕ ಕುಂದುಕೊರತೆ ಪರಿಹಾರ ಮತ್ತು ತಾಲೂಕು ಪಂಚಾಯತ್‌ನ ಸ್ಪಂದನಶೀಲ ಆಡಳಿತವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2022-23 ನೇ ಸಾಲಿನ ತಾಲೂಕು ಪಂಚಾಯತಿ ಮತ್ತು ವಿವಿಧ ಇಲಾಖೆಗಳಲ್ಲಿನ ಜಮಾ ಖರ್ಚಿನ ಬಗ್ಗೆ ಸಾರ್ವಜನಿಕರ ಸಮ್ಮುಖದಲ್ಲಿ ಜಮಾಬಂದಿಯನ್ನು ಸೆ.11ರಂದು ಸೋಮವಾರ ಪೂರ್ವಾಹ್ನ ಗಂಟೆ 11.00ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಕಚೇರಿಯಲ್ಲಿ ಮಾನ್ಯ ಯೋಜನಾ ನಿರ್ದೇಶಕರು, ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಇವರ ಉಪಸ್ಥಿತಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದ್ದಾರೆ.

More from the blog

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಲೋಕಸಭಾ ಚುನಾವಣೆ : ಮತಯಂತ್ರಗಳ ಕಮಿಷನಿಂಗ್‌ ಕಾರ್ಯ…. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ :ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು. ಈ ಸಂದರ್ಭದಲ್ಲಿ...