Wednesday, April 17, 2024

ಘನ‌ ಮತ್ತು ದ್ರವ ಸಂಪನ್ಮೂಲ ನಿರ್ವಹಣೆಯ ಕುರಿತು ಗ್ರಾ.ಪಂ.ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಜಿ.ಪಿ.ಎಲ್.ಎಫ್ ಅಧ್ಯಕ್ಷರು ,ಎಂ.ಬಿ‌.ಕೆ.ಮತ್ತು ಎಲ್.ಸಿ.ಆರ್.ಪಿ.ರವರುಗಳಿಗೆ ತರಬೇತಿ ಕಾರ್ಯಗಾರ

ಬಂಟ್ವಾಳ: ಘನ‌ ಮತ್ತು ದ್ರವ ಸಂಪನ್ಮೂಲ ನಿರ್ವಹಣೆಯ ಕುರಿತು ಗ್ರಾ.ಪಂ.ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಜಿ.ಪಿ.ಎಲ್.ಎಫ್ ಅಧ್ಯಕ್ಷರು ,ಎಂ.ಬಿ‌.ಕೆ.ಮತ್ತು ಎಲ್.ಸಿ.ಆರ್.ಪಿ.ರವರುಗಳಿಗೆ ಎ ತರಬೇತಿ ಕಾರ್ಯಗಾರ ತಾ.ಪಂ.ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಯರಾಮ್ ಮಾತನಾಡಿ, ತ್ಯಾಜ್ಯ ಮುಕ್ತ ಗ್ರಾಮವಾಗಿ ಪರಿವರ್ತನೆ ಮಾಡಲು ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರತಿಯೊಬ್ಬರು ಪ್ರತಿಜ್ಞೆ ಮಾಡಬೇಕಾಗಿದೆ.

ಪ್ಲಾಸ್ಟಿಕ್ ಬಳಕೆಯನ್ನು ಮಾಡುವುದು ಪೂರ್ಣವಾಗಿ ನಿಷಿದ್ಧ ಮಾಡುತ್ತೇವೆ,ಮನೆಗೆ ಕಡ್ಡಾಯವಾಗಿ ಪ್ಲಾಸ್ಟಿಕ್ ಚೀಲ ಸಹಿತ ಯಾವುದೇ ವಸ್ತುಗಳನ್ನು ತರುವುದಿಲ್ಲ ಎಂಬುದನ್ನು ಪ್ರತಿಯೊಬ್ಬ ವ್ಯಕ್ತಿಯು ಕಟ್ಟುನಿಟ್ಟಾಗಿ ಪಾಲನೆ ಮಾಡಿದರೆ ಪ್ಲಾಸ್ಟಿಕ್ ಮುಕ್ತ ಮನೆಯಾಗಿ ಬದಲಾವಣೆ ಮಾಡಬಹುದು.

ಯಾವುದೇ ವಸ್ತುಗಳ ಬಳಕೆ ನಿಷೇಧ ಮಾಡಲು ಒತ್ತಾಯ ಪೂರ್ವಕವಾಗಿ ಮಾಡಲು ಅಸಾಧ್ಯ. ಬದಲಾಗಿ ಮನಪರಿವರ್ತನೆ ಮೂಲಕ ಇಂತಹ ನಿಷೇಧಗಳು ಯಶಸ್ವಿಯಾಗಲು ಸಾಧ್ಯ ಎಂದು ಅವರು ತಿಳಿಸಿದರು.

ತ್ಯಾಜ್ಯ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಭಯಾನಕ ರೋಗಗಳ ಹೆಚ್ಚಾಗುವ ಸಾಧ್ಯತೆ ಇರುವ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡುವ ಕೆಲಸಗಳು ಆಗಬೇಕಾಗಿದೆ.

ಈ ನಿಟ್ಟಿನಲ್ಲಿ ಜನರಿಗೆ ಸರಿಯಾದ ಮಾಹಿತಿ ನೀಡಿ ಆರೋಗ್ಯ ರಕ್ಷಣೆಯ ಜವಬ್ದಾರಿಯ ಬಗ್ಗೆ ತಿಳಿಸುವ ,ಚಿಂತನೆಯ ಕಾರ್ಯಕ್ರಮಗಳು ನಡೆಯಬೇಕು ಎಂದು ಅವರು ತಿಳಿಸಿದರು.

ಗ್ರಾಮ ಪಂಚಾಯತ್ ನ ಜವಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಗಳು ತ್ಯಾಜ್ಯ ಮುಕ್ತ,ಪ್ಲಾಸ್ಟಿಕ್ ಮುಕ್ತ ಗ್ರಾಮ ನಿರ್ಮಾಣದ ಗುರಿಯನ್ನು ಸಾಧಿಸಲು ಅಧಿಕಾರಿಗಳ ಜೊತೆಯಾಗಿ ಕೆಲಸ ಮಾಡಿ ಎಂದು ಅವರು ತಿಳಿಸಿದರು.

ತಾ.ಪಂ.ಆಡಳಿತಾಧಿಕಾರಿ ಎಚ್.ಆರ್.ನಾಯಕ್, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ , ಸಹಾಯಕ ನಿರ್ದೇಶಕ ( ಗ್ರಾಮೀಣ ಉದ್ಯೋಗ) ದಿನೇಶ್ ಉಪಸ್ಥಿತರಿದ್ದರು.

More from the blog

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಲೋಕಸಭಾ ಚುನಾವಣೆ : ಮತಯಂತ್ರಗಳ ಕಮಿಷನಿಂಗ್‌ ಕಾರ್ಯ…. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ :ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು. ಈ ಸಂದರ್ಭದಲ್ಲಿ...