Thursday, April 11, 2024

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರ ಲಾಯಿಲಾ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 1722 ನೇ ಮಧ್ಯವರ್ಜನ ಶಿಬಿರ

ವಿಟ್ಲ: ಮಧ್ಯವ್ಯಸನ ಬಿಟ್ಟು ಹೊಸ ಜೀವನ ಕಟ್ಟಿಕೊಳ್ಳಿ, ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಎಂದು ವಿಟ್ಲ ಜನ ಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ಅರಮನೆ ವಿಟ್ಲ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು, ತಾಲೂಕು ಜನಜಾಗೃತಿ ವೇದಿಕೆ ಬಂಟ್ವಾಳ, ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ವಿಟ್ಲ, ಪಟ್ಟಣ ಪಂಚಾಯತ್ ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ವಿಟ್ಲ, ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಲ, ಜಸ್ಟಿಸ್ ಕೆ ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, ರೋಟರಿ ಕ್ಲಬ್ ಬಂಟ್ವಾಳ, ನವಜೀವನ ಸಮಿತಿ ವಿಟ್ಲ, ಹಾಗೂ ಸ್ಥಳಿಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರ ಲಾಯಿಲಾ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರಗುವ 1722 ನೇ ಮಧ್ಯವರ್ಜನ ಶಿಬಿರ ವನ್ನು ಅಕ್ಷಯ ಸಮುದಾಯ ಭವನ ಶಾಂತಿನಗರ ವಿಟ್ಲ ಇಲ್ಲಿ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಮೋನಪ್ಪ ಗೌಡ ವಹಿಸಿದ್ದರು.

ಮುಖ್ಯ ಅತಿಥಿಗಳಾದ ಯೋಜನೆಯ ದಕ್ಷಿಣ ಕನ್ನಡ ಎರಡರ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಮಾತನಾಡಿ ವ್ಯಸನಮುಕ್ತ ಸಮಾಜ ನಿರ್ಮಿಸುವ ಉದ್ದೇಶದಿಂದ ಪೂಜ್ಯ ಖಾವಂದರು ಜನಜಾಗ್ರತಿ ವೇದಿಕೆಯ ಮೂಲಕ ಹಮ್ಮಿಕೊಂಡ ಕಾರ್ಯಕ್ರಮವೇ ಮಧ್ಯವರ್ಜನ ಶಿಬಿರ, ಈ ಮೂಲಕ ಹೊಸ ಜೀವನ ನಡೆಸಲು ದಾರಿದೀಪ ವಾಗಿದೆ. ಶಿಬಿರಾರ್ಥಿಗಳನ್ನು ಯಾವುದೇ ಆನೆ ಪ್ರಮಾಣ, ಔಷಧಿಗಳನ್ನು ನೀಡದೆ ಕೇವಲ ಮನಸ್ಸು ಪರಿವರ್ತನೆ ಮಾಡುವ ಮೂಲಕ ಕುಡಿತದ ಚಟವನ್ನು ಬಿಡಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿಸುದೇ ಇದರ ಉದ್ದೇಶ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ನವೀನ್ ಚಂದ್ರ, ಡಾಕ್ಟರ್ ಮಂದಾರ ಜೈನ್, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇಲ್ಲಿನ ಹಿರಿಯ ಆರೋಗ್ಯ ಸುರಾಕ್ಷಣಾಧಿಕಾರಿ ಕುಸುಮಾವತಿ,ರಾಧಾಕೃಷ್ಣ ಚಲ್ಲಡ್ಕ, ರೋಟರಿ ಕ್ಲಬ್ ಬಂಟ್ವಾಳ ಇದರ ಮಾಜಿ ಅಧ್ಯಕ್ಷ ಪುಷ್ಪರಾಜ್ ಹೆಗ್ಡೆ , ಮುಡಿಪು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಚಂದ್ರಶೇಖರ್ ಆಳ್ವ, ಪೆರ್ನೆ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರೋಹಿತಾಕ್ಷ, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ, ವಿಟ್ಲ ವಲಯ ಅಧ್ಯಕ್ಷ, ಪ್ರಮೀಳಾ, ಅಳಿಕೆ ವಲಯ ಅಧ್ಯಕ್ಷ ರಾಜೇಂದ್ರ , ಕೇಪು ವಲಯ ಅಧ್ಯಕ್ಷೆ ಪುಷ್ಪಾಕರ್ ರೈ , ಮೊದಲದವರು ಉಪಸ್ಥಿತರಿದ್ದರು.

ವಿಟ್ಲ ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ, ಸ್ವಾಗತಿಸಿ, ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಸ್ತಾವಿಕ ಮಾತುಗಳನಾಡಿ, ಕೇಪು ವಲಯ ಮೇಲ್ವಿಚಾರಕ ಜಗದೀಶ್ ವಂದಿಸಿದರು. ಮುಡಿಪು ವಲಯ ಮೇಲ್ವಿಚಾರಕ ಗಂಗಾಧರ್ ಕಾರ್ಯಕ್ರಮ ನಿರೂಪಿಸಿದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...