Sunday, October 22, 2023

ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ಪಲ್ಟಿ

Must read

ಉಪ್ಪಿನಂಗಡಿ: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾವೊಂದು ಮಗುಚಿ ಬಿದ್ದು 9 ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂರುಗೋಳಿ ಬಳಿ ಸಂಭವಿಸಿದೆ

ಕಲ್ಲೇರಿ ಆಸುಪಾಸಿನಿಂದ ಮೂಡಡ್ಕದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಆಟೋ ರಿಕ್ಷಾಕ್ಕೆ ಮೂರುಗೋಳಿ ಬಳಿ ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡ ಆಟೋ ರಿಕ್ಷಾ ಮಗುಚಿ ಬಿದ್ದಿದೆ.

ಗಾಯಾಳು ಮಕ್ಕಳಿಗೆ ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

More articles

Latest article