Friday, October 20, 2023

ಹೃದಯಾಘಾತದಿಂದ ಯುವಕ ಸಾವು

Must read

ಬೆಳ್ತಂಗಡಿ :ಯುವಕನೊಬ್ಬ ಮನೆಯಲ್ಲಿರುವ ವೇಳೆ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕಿರ್ನಡ್ಕದಲ್ಲಿ ನಡೆದಿದೆ.

ಮೃತ ಯುವಕನನ್ನು ಕಿರ್ನಡ್ಕ ನಿವಾಸಿ ಕಿಟ್ಟಣ್ಣ ನಾಯ್ಕ ಮತ್ತು ವೇದಾವತಿ ದಂಪತಿಯ ಪುತ್ರ ಪ್ರದೀಪ್ ಎಂದು ಗುರುತಿಸಲಾಗಿದೆ.

ಹೃದಯಾಘಾತವಾದ ತಕ್ಷಣವೇ ಉಜಿರೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತರು ಸಹೋದರಿ ಪದ್ಮಾವತಿ, ಸಹೋದರ ನಿತೇಶ್ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ

More articles

Latest article