Wednesday, April 17, 2024

ಶಂಕಿತ ಡೆಂಗ್ಯೂ ಜ್ವರಕ್ಕೆ ವಿಟ್ಲದ ಯುವತಿ ಮೃತ್ಯು

ಬಂಟ್ವಾಳ:ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಪೆರುವಾಯಿ ನಿವಾಸಿ ಆಶಾ ಮೃತಪಟ್ಟ ಯುವತಿ.

ಆಶಾ ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ‌ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಆದರೆ ಜ್ವರದ ಬಗ್ಗೆ ವೈದ್ಯರು ಸ್ಪಷ್ಟವಾದ ಮಾಹಿತಿ ನೀಡುತ್ತಿಲ್ಲ.

ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು,ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...