Wednesday, October 18, 2023

ದ.ಕ.ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ ರಾಜ್ಯಪಾಲರ ಭೇಟಿ

Must read

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಅಧ್ಯಕ್ಷ ಶ್ರಿನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಭೇಟಿಯಾಗಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.

ಗ್ರಾಮ ವಾಸ್ತವ್ಯ ಪರಿಕಲ್ಪನೆಗೆ ಮೆಚ್ಚುಗೆ ಸೂಚಿಸಿದ ರಾಜ್ಯಪಾಲರು, ಪತ್ರಕರ್ತರ ಸಂಘದ ಸಮಾಜಮುಖಿ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ಸ್ಪೀಕರ್ ಯು.ಟಿ.ಖಾದರ್ ಇದ್ದರು.

ನಿಯೋಗದಲ್ಲಿ ಪತ್ರಕರ್ತರ ಸಂಘದ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಪತ್ರಿಕಾಭವನ ಟ್ರಸ್ಟಿ ಸುಖಪಾಲ್ ಪೊಳಲಿ, ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಇದ್ದರು.

More articles

Latest article