Saturday, April 13, 2024

ದಲಿತ ವಿರೋಧಿ ಸಚಿವ ಸುಧಾಕರ್ ರಾಜಿನಾಮೆ ಕೂಡಲಿ:ದಿನೇಶ್ ಅಮ್ಟೂರು 

ಕಾಂಗ್ರೆಸ್‌ ಸರ್ಕಾರದ ಸಚಿವ ಸಂಪುಟದಲ್ಲಿರುವ ಸಚಿವ ಡಿ ಸುಧಾಕರ್ ರವರಿಂದ ದಲಿತ ಕುಟುಂಬ ಒಂದು ಪ್ರಾಣಭಯದಿಂದ ಬದುಕುತ್ತಿರುವುದು ಶೋಚನೀಯ ಸ್ಥಿತಿಯಾಗಿದೆ. ಇದು ಇಡೀ ರಾಜ್ಯದಲ್ಲಿ ಇಂದಿನ ದಲಿತರ ಸ್ಥಿತಿಯ ಚಿತ್ರಣವಾಗಿದೆ. ಡಿ ಸುಧಾಕರ್ ರವರ ವಿರುದ್ಧ ದಲಿತರ ಮೇಲೆ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣದಡಿ ಎಫ್‌ಐಆರ್ ದಾಖಲಾಗಿದ್ದರೂ ಇದುವರೆಗೂ ಅವರ ರಾಜೀನಾಮೆ ಪಡೆಯದೆ ಇರುವುದು ಸರ್ಕಾರದ ಇಬ್ಬಗೆ ನೀತಿಯನ್ನು ತೋರುತ್ತದೆ, ಮತ್ತು ಈ ಸರ್ಕಾರದಲ್ಲಿ ದಲಿತರ ಪ್ರಾಣಗಳಿಗೆ ಮಾನಗಳಿಗೆ ಬೆಲೆ ಇಲ್ಲವೆಂಬುದು ಖಚಿತವಾಗಿದೆ ಎಂದು ತಾ.ಪಂ.ಮಾಜಿ ಉಪಾಧ್ಯಕ್ಷ ,ಎಸ್ ಸಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ, ಸದಸ್ಯ ದಿನೇಶ್ ಅಮ್ಟೂರು ತಿಳಿಸಿದ್ದಾರೆ.

ಸೆವೆನ್ ಹಿಲ್ಸ್ ಕಂಪನಿಯ ಪಾಲುದಾರರಾದ ಡಿ ಸುಧಾಕರ್ ರವರು ಮೋಸದಿಂದ ಯಲಹಂಕ ಗ್ರಾಮದ ಸುಬ್ಬಮ್ಮ ರವರಿಗೆ ಸೇರಿದ 108/1 ಸರ್ವ ನಂಬರ್ ಜಮೀನನ್ನು ಕಬಳಿಕೆ ಮಾಡಿರುವುದು ಸ್ಪಷ್ಟವಾಗಿ ದಾಖಲೆ ಸಮೇತ ತಿಳಿಯುತ್ತಿದೆ, ಈ ಜಮೀನಿನ ವಿವಾದವು ನ್ಯಾಯಾಲಯದಲ್ಲಿ ಇರುವಾಗಲೇ ಡಿ. ಸುಧಾಕರ್ ರವರು ತಮ್ಮ 40 ಜನ ಪುಡಿ ರೌಡಿಗಳನ್ನು ಕಳಿಸಿ ಆ ದಲಿತ ಕುಟುಂಬದ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಲ್ಲದೆ ಜೆಸಿಬಿಯಿಂದ ಅವರ ಮನೆಯನ್ನು ನೆಲಸಮ ಮಾಡಿದ್ದಾರೆ. ಈ ವಿಚಾರವಾಗಿ ವೈರಲ್ ಆದ ವಿಡಿಯೋ ಒಂದರಲ್ಲಿ ನಾನು ಮಚ್ಚುಗಳನ್ನು ಹಿಡಿದು ಆಂಧ್ರಪ್ರದೇಶದಲ್ಲಿ ಓಡಾಡಿರುವ ರೌಡಿ ಎಂದು ಅವರೇ ಹೇಳಿಕೊಂಡಿದ್ದಾರೆ.

ಇಂತಹ ರೌಡಿಗಳಿಗೆ ಸಚಿವ ಸ್ಥಾನ ನೀಡಿದ ಕಾಂಗ್ರೆಸ್ ಸರ್ಕಾರದಿಂದ ನಾವು ಉತ್ತಮ ಅಡಳಿತವನ್ನು ನಿರೀಕ್ಷಿಸಲು ಸಾಧ್ಯವಿದೆ.

ಈ ಪ್ರಕರಣದಲ್ಲಿ ಡಿ. ಸುಧಾಕರ್ ರವರ ರಾಜೀನಾಮೆಯನ್ನು ಶೀಘ್ರವೇ ಪಡೆದು ಅವರನ್ನು ಕಾನೂನಾತ್ಮಕವಾಗಿ ಬಂಧಿಸಬೇಕೆಂಬುದು ನನ್ನ ಆಗ್ರಹವಾಗಿದೆ.

ಕಾಂಗ್ರೆಸ್ ಸರ್ಕಾರದ ಮತ್ತೊಬ್ಬ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಸಾರ್ವಜನಿಕವಾಗಿ ಹೊಲಗೇರಿ ಎಂಬ ಜಾತಿ ನಿಂದಕ ಪದವನ್ನು ಬಳಸಿ ಸಚಿವ ಸಂಪುಟದಲ್ಲಿ ಉಳಿಯುತ್ತಾರೆ, ಈಗ ಸಚಿವ ಸಂಪುಟದ ಮತ್ತೊಬ್ಬ ಸಚಿವ ಡಿ.ಸುಧಾಕರ್ ದಲಿತರ ಮೇಲೆ ದೌರ್ಜನ್ಯ ಎಸಗಿ ಪ್ರಾಣಬೆದರಿಕೆ ಒಡ್ಡಿ ಸಚಿವ ಸಂಪುಟದಲ್ಲಿ ಉಳಿಯಬಹುದಾದರೆ ಇಂಥ ಸರ್ಕಾರದಿಂದ ದಲಿತರ ರಕ್ಷಣೆ ಸಾಧ್ಯವೇ? ಎಸ್ ಸಿ.ಎಸ್ /ಟಿ ಹಣವನ್ನು ತನ್ನ ಇಚ್ಚೆ ಬಂದಂತೆ ಬಳಸಿಕೊಳ್ಳುತ್ತಿರುವ ಈ ಸರ್ಕಾರದಿಂದ ಪರಿಶಿಷ್ಟ ಜಾತಿಯವರ ಅಭಿವೃದ್ಧಿ ಸಾಧ್ಯವೇ ? ಇಂತಹ ಆ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರವು ಈ ರಾಜ್ಯಕ್ಕೆ ಬೇಕಾಗಿದೆಯೇ ? ಎಂದು ಅವರು ಪ್ರಶ್ನಿಸಿ ಪತ್ರಿಕಾ ಪ್ರಕಟನೆ ನೀಡಿದ್ದಾರೆ.

More from the blog

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...