Sunday, October 22, 2023

ಸೆ.6 ರಂದು ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ 

Must read

ವಿಟ್ಲ: ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರದ ವತಿಯಿಂದ ಸೆ.6 ರಂದು ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಡೆಯಲಿದೆ.

ವಿಟ್ಲದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ವೀರಪ್ಪ ಗೌಡ ರಾಯರಬೆಟ್ಟು ಮಾಹಿತಿ ನೀಡಿದರು.

ಪ್ರಧಾನ ಕಾರ್ಯದರ್ಶಿ ರವಿಶಂಕರ ಮಾತನಾಡಿ ವಿಟ್ಲದ ಪ್ರಮುಖ ರಸ್ತೆಯಲ್ಲಿ ಶ್ರೀ ಕೃಷ್ಣ ವೇಷಧಾರಿ ಮಕ್ಕಳ ಆಕರ್ಷಕ ಶೋಭಾಯಾತ್ರೆ ನಡೆಯಲಿದೆ. ಬಳಿಕ ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ನಂತರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜೇಶ್ ವಿಟ್ಲ ಸಾರಥ್ಯದಲ್ಲಿ ನಾಟ್ಯಗುರು ರಕ್ಷಿತ್ ಶೆಟ್ಟಿ ಪಡ್ರೆ ನಿರ್ದೇಶನದಲ್ಲಿ ಆರ್.ಕೆ ಯಕ್ಷಗಾನ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀಕೃಷ್ಣ ಲೀಲಾಮೃತ ಪೌರಾಣಿಕ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಜಯರಾಮ್ ಬಲ್ಲಾಳ್, ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಸಿ.ಹೆಚ್, ಜಗದೀಶ್ ಪಾಣೆಮಜಲು ಉಪಸ್ಥಿತರಿದ್ದರು.

More articles

Latest article