Saturday, April 6, 2024

ಮಸೀದಿಯ ಬಳಿ ಜೈ ಶ್ರೀರಾಮ್‌ ಘೋಷಣೆ : ಇಬ್ಬರ ಬಂಧನ

ಕಡಬ: ಮರ್ದಾಳ ಮಸೀದಿಯ ಆವರಣದೊಳಗೆ ತಡರಾತ್ರಿ ನುಗ್ಗಿ ಜೈ ಶ್ರೀರಾಮ್‌ ಕೂಗಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ಕೀರ್ತನ್‌ ಹಾಗೂ ಕೈಕಂಬ ನಡೋಟ ನಿವಾಸಿ ಸಚಿನ್‌ ಬಂಧಿತರು.

ರಾತ್ರಿ ಬೈಕ್‌ನಲ್ಲಿ ಆಗಮಿಸಿದ ಆರೋಪಿಗಳು ಮಸೀದಿಯ ವರಾಂಡದಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದರು. ಸದ್ದು ಕೇಳಿ ಮಸೀದಿಯಿಂದ ಹೊರಬಂದ ಧರ್ಮಗುರುಗಳನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ.

ಆರೋಪಿಗಳು ಬೈಕಿನಲ್ಲಿ ಮಸೀದಿಯ ಆವರಣದ ಒಳಗಡೆ ಬಂದು ತೆರಳುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

ಇನ್ನು ಪೊಲೀಸರು ಘಟನ ಸ್ಥಳಕ್ಕೆ ಬಂದು ಮಾಹಿತಿ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

More from the blog

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ...

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದವರು ಗಂಭೀರ

ವಿಟ್ಲ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿಯಲ್ಲಿ ಗುರುವಾರ ರಾತ್ರಿ ಮರ ಸಾಗಾಟ ಲಾರಿಗೆ ಕಾರು ಡಿಕ್ಕಿಯಾಗಿದೆ. ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು...

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಉಚಿತ ಸಾಮೂಹಿಕ ವಿವಾಹ : ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರ ನೇತ್ರತ್ವದಲ್ಲಿ...