Friday, April 12, 2024

ಐತ್ತೂರಿನಲ್ಲಿ ಕಾಡಾನೆ ದಾಳಿ ; ವ್ಯಕ್ತಿ ಗಂಭೀರ

ಕಡಬ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ನಡೆದಿದೆ.

ಐತ್ತೂರು ಗ್ರಾಮದ ಗೇರ್ತಿಲ‌ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ ಗಾಯಗೊಂಡವರು.

ಅವರು ಗುರುವಾರ ಸಂಜೆ ಕೂಲಿ‌ ಕೆಲಸ ಬಿಟ್ಟು ಮನೆಯ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಗ್ರಾಮದ ನೆಲ್ಯಡ್ಕ ಶಾಲೆಗೆ ಹೊಂದಿಕೊಂಡಿರುವ ಕಾರ್ತಿಕೇಯ ಭಜನಾ ಮಂದಿರದ ಬಳಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ. ಪರಿಣಾಮವಾಗಿ ಚೋಮ‌ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿ ಪ್ರಥಮ‌ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

More from the blog

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...