Friday, April 5, 2024

ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ಚರಂಡಿಗೆ: ಚಾಲಕ ಅಪಾಯದಿಂದ ಪಾರು

ಬಂಟ್ವಾಳ; ಕೆ‌.ಎನ್.ಆರ್.ಸಿ.ಕಂಪೆನಿಗೆ ಸೇರಿದ ಘನಗಾತ್ರದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇಂದು ಮಾಣಿಯ ಒಳರಸ್ತೆಯೊಂದರಲ್ಲಿ ನಡೆದಿದೆ.


ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಇಲ್ಲದೆ ಚಾಲಕ ಪಾರಾಗಿದ್ದಾನೆ .
ಬಿಸಿರೋಡು – ಅಡ್ಡಹೊಳೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿ ಇದಾಗಿದೆ.
ಇವರ ಲಾರಿ ಸಹಿತ ಇತರ ವಾಹನಗಳು ಅಗಾಗ ಅಪಘಾತಕ್ಕೀಡಾಗುತ್ತಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಇತ್ತೀಚಿಗೆ ಸಂಸದರ ಜೊತೆಗೆ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ನಡೆಸಿದ ಸಭೆಯಲ್ಲಿ ಕೂಡ ಈ ವಿಚಾರ ಪ್ರಸ್ತಾಪವಾಗಿತ್ತು.
ಕಂಪೆನಿ ವಾಹನಗಳು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡುವುದರ ಬಗ್ಗೆ ದೂರು ನೀಡಿದ ಅವರು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದರು.ಆದರೆ ಅ ಬಳಿಕವೂ ಮೆಲ್ಕಾರ್ ಸಹಿತ ಅನೇಕ ಕಡೆಗಳಲ್ಲಿ ವಾಹನ ಅಪಘಾತ ಸಂಭವಿಸಿದೆ.
ಹಾಗಾಗಿ ಕಂಪೆನಿಯ ಪ್ರಮುಖರು ಈ ಬಗ್ಗೆ ಹೆಚ್ಚು ಗಮನಹರಿಸುವಂತಾಗಬೇಕು ಎಂದು ಸಾರ್ವಜನಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...