Sunday, October 22, 2023

ಮಾಧ್ಯಮಗಳ ಮೇಲಿನ ಎಫ್.ಐ.ಆರ್.ಗೆ ಹೈಕೋರ್ಟ್ ತಡೆಯಾಜ್ಞೆ

Must read

ಪುತ್ತೂರು: ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಸುಳ್ಳು ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನೋರ್ವ ಕಾರಿನಲ್ಲಿ ಸುತ್ತಾಟ ನಡೆಸಿದ್ದಾನೆ ಎಂದು ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪದಲ್ಲಿ ಸುಳ್ಯ ಠಾಣಾ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದಿದ್ದರು. ವಿಷಯ ಸುದ್ದಿಯಾಗುತ್ತಲೇ ಅರುಣ್ ಕುಮಾರ್ ಪುತ್ತಿಲ ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾತುಕತೆ ನಡೆಸಿ ಯುವಕರನ್ನು ರಿಲೀಸ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದವು.

ಸಾಮಾಜಿಕ ಮಾಧ್ಯಮದಲ್ಲಿ ವರದಿ ಮಾಡಿ ಅಂತರ್ಜಾಲದಲ್ಲಿ ಪ್ರಕಟಿಸಿದ ಮಾಧ್ಯಮಗಳ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಾಗಿತ್ತು. ಮಾಧ್ಯಮಗಳ ಮೇಲಿನ ಕೇಸು ದಾಖಲಾತಿಯನ್ನು ಗಂಭೀರವಾಗಿ ಪರಿಗಣಿಸಿದ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಘಟಕ ಯೂನಿಯ‌ನ್ ಜಿಲ್ಲಾ ಮತ್ತು ರಾಜ್ಯ ಸಮಿತಿಯ ನಿರ್ದೇಶನದಂತೆ ಹೈಕೋರ್ಟ್ ಮೊರೆ ಹೋಗಿತ್ತು.

ಘಟನೆಗೆ ಸಂಬಂಧಪಟ್ಟ ಎಲ್ಲಾ ಸಾಕ್ಷ್ಯಧಾರಗಳ ಜೊತೆ ನೇರ ಹಾಗೂ ಸ್ಪಷ್ಟ ಮಾಹಿತಿಯನ್ನು ಭಿತ್ತರಿಸಿದ ಮಾಧ್ಯಮಗಳ ಪರವಾಗಿ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಹೈಕೋರ್ಟಲ್ಲಿ ವಾದ ಮಂಡಿಸಿದ್ದರು.  ನ್ಯಾಯವಾದಿಗಳಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿಸಿದ್ದರು.

ಈ ಘಟನೆಗೆ ಸಂಬಂಧಪಟ್ಟಂತೆ  ಮಾಧ್ಯಮಗಳ ಮೇಲೆ ದಾಖಲಾದ ಎಫ್.ಐ.ಆರ್. ಮೇಲೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಪತ್ರಿಕಾ ಮಾಧ್ಯಮಗಳ ಸ್ವಾತಂತ್ರ್ಯ ಹರಣಕ್ಕೆ ಮುಂದಾದ  ಪೊಲೀಸ್ ಇಲಾಖೆಗೆ ಚಾಟಿ ಬೀಸಿದೆ.

More articles

Latest article