Thursday, October 26, 2023

ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ದ.ಕ ಜಿಲ್ಲಾ ಪ್ರವಾಸ

Must read

ಮಂಗಳೂರು: ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಸೆ.8ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ವಿವರ ಇಂತಿದೆ:

ಸೆ.8 ರಂದು ಬೆಳಿಗ್ಗೆ 11 ಗಂಟೆಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11.25ಕ್ಕೆ ಸಕ್ರ್ಯೂಟ್ ಹೌಸ್ ಗೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ. ನಂತರ ಅಲ್ಲಿಂದ 12 ಗಂಟೆಗೆ ನಗರದ ಟಿ.ಎಂ.ಎ. ಪೈ ಕನ್‍ವೆನ್‍ಶನ್ ಸಭಾಂಗಣದಲ್ಲಿ ದಿ ಫಿಸಿಯೋಥೆರಪಿ ಕಾನ್ಫರೆನ್ಸ್ ಮ್ಯಾಂಗಳೂರ್ ಫಿಸಿಯೋಕಾನ್ 2023 ಕಾರ್ಯಕ್ರಮ ಉದ್ಘಾಟಿಸುವರು.

ಮಧ್ಯಾಹ್ನ 1 ಗಂಟೆಗೆ ನಗರದ ಹೋಟೆಲ್ ತಾಜ್ ವಿವಂತಾದಲ್ಲಿ ವಾಸ್ತವ್ಯ ಮಾಡಲಿದ್ದಾರೆ. 1.30ಕ್ಕೆ ಖಾಸಗಿ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆಡಳಿತದ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು. ಸಂಜೆ 5.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

More articles

Latest article