Thursday, April 11, 2024

ಖಾಸಗಿ ಬಸ್ ಢಿಕ್ಕಿ ; ರಸ್ತೆ ದಾಟಲು ನಿಂತಿದ್ದ ಇಬ್ಬರು ಯುವಕರು ಗಂಭೀರ

ಸುರತ್ಕಲ್: ಖಾಸಗಿ ಎಕ್ಸ್ ಪ್ರೆಸ್ ಬಸ್ ನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ನಡೆದಿದೆ

ಗಾಯಗೊಂಡವರನ್ನು ಹಳೆಯಂಗಡಿ ಇಂದಿರಾ ನಗರ ನಿವಾಸಿ ಪುತ್ತುಮೋನು ಎಂಬವರ ಮಗ ಮುಹಮ್ಮದ್ ಸಾಹಿಲ್ ಮತ್ತು ಪಕ್ಷಿಕೆರೆ ಹೊಸಕಾಡು ನಿವಾಸಿ ಇಮ್ಮಿಯಾಝ್ ಎಂಬವರ ಮಗ ಅರಾಫತ್ ಎಂದು ತಿಳಿದು ಬಂದಿದೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಎಂಬಲ್ಲಿ ಮಂಗಳೂರಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್ ಪ್ರೆಸ್ ಬಸ್ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ರಸ್ತೆ ಬದಿ ಬೈಕ್ ನೊಂದಿಗೆ ನಿಂತಿದ್ದ ಯುವಕರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಿಂದ ಅರಾಫತ್ ಅವರಿಗೆ ಕೈ, ಕಾಲು, ತಲೆಗೆ ಗಂಭೀರ ಗಾಯಗಳಾಗಿದೆ. ಸಾಹಿಲ್ ಅವರೂ ಗಂಭೀರ ಗಾಯಗೊಂಡಿದ್ದು ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....