Monday, April 8, 2024

ಪೊಲೀಸರ ಎದುರೇ ಮಗುವಿನ ಕೊಲೆಗೆ ಯತ್ನಿಸಿದ ತಂದೆ

ಮಂಗಳೂರು: ಮದ್ಯ ಸೇವಿಸಿದ ವ್ಯಕ್ತಿಯೋರ್ವ ಪೊಲೀಸರ ಎದುರಲ್ಲಿಯೇ ತನ್ನ ಮಗುವನ್ನು ಎತ್ತಿ ನೆಲಕ್ಕೆ ಎಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.

ಮಹೇಶ್‌ ಆರೋಪಿ ಎಂದು ತಿಳಿದುಬಂದಿದೆ.

ಈತ ಹಲವು ಸಮಯದಿಂದ ಪತ್ನಿ ಮತ್ತು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಮಾತ್ರವಲ್ಲದೇ ಪತ್ನಿ ಮತ್ತು ಮಕ್ಕಳನ್ನು ಬೆಂಕಿ ಹಚ್ಚಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಪತ್ನಿ ಪಕ್ಕದಲ್ಲಿರುವ ಕದ್ರಿ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಆಕೆಯ ಮನೆಗೆ ಹೊರಡುತ್ತಿದ್ದಂತೆ ಆರೋಪಿ ಮಹೇಶ್‌ ತನ್ನ 6 ವರ್ಷದ ಗಂಡು ಮತ್ತು ಒಂದೂವರೆ ವರ್ಷದ ಹೆಣ್ಣುಮಗುವನ್ನು ಕರೆದುಕೊಂಡು ಠಾಣೆಗೆ ಬಂದಿದ್ದ. ಪೊಲೀಸರು ವಿಚಾರಿಸುತ್ತಿದ್ದಾಗ ಮಗುವನ್ನು ನೀಡದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತ ಮಗುವನ್ನು ಎಸೆದಿದ್ದಾನೆ.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...