Saturday, April 13, 2024

ಭೂ ಮಾಲಕರ ಸಮಸ್ಯೆ ಪರಿಹಾರಕ್ಕೆ ಯತ್ನ:ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಮಾರ್ಗದ ಸಾಣೂರು – ಬಿಕರ್ನಕಟ್ಟೆ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲೀಕರ ಪರಿಹಾರಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಪ್ರಯತ್ನಿಸಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಭರವಸೆ ನೀಡಿದರು.

ಅವರು ಆ.31ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಭೂ ಮಾಲೀಕರ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಭೂ ಮಾಲೀಕರಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ ಅವರು, ಹೆದ್ದಾರಿಗಳು ಅಭಿವೃದ್ಧಿ ಸೂಚ್ಯಂಕದ ಮಾಪನವಾಗಿದ್ದು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರದ ಆರ್ಥಿಕ ಚಟುವಟಿಕೆಗಳ ಏಳಿಗೆಗೆ ಪೂರಕವಾಗಿರುತ್ತದೆ. ಈ ದಿಸೆಯಲ್ಲಿ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ಒದಗಿಸಿದ ಭೂ ಮಾಲೀಕರ ಸಮಸ್ಯೆಗಳನ್ನು ಬಗೆ ಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದವರು ಹೇಳಿದರು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ, ವಿಶೇಷ ಭೂಸ್ವಾದೀನಾಧಿಕಾರಿ ಮಹಮದ್ ಇಸಾಕ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಸಂಬಂಧಿಸಿದ ಅಧಿಕಾರಿಗಳು,

ಭೂ ಮಾಲೀಕರ ಹೋರಾಟ ಸಮಿತಿಯ ಅಧ್ಯಕ್ಷರಾದ ಮರಿಯಮ್ಮ ಥಾಮಸ್, ಸಂಚಾಲಕರಾದ ಪ್ರಕಾಶ್, ಪದಾಧಿಕಾರಿಗಳಾದ ರತ್ನಾಕರ, ಜಯರಾಮ್ ಪೂಜಾರಿ, ವಿಶ್ವಜಿತ್ ಸೇರಿದಂತೆ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

More from the blog

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ಏ.14ರಂದು ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ಕುಮಾರಧಾರಾ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆ

ಸುಬ್ರಹ್ಮಣ್ಯ: ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ನದಿಯ ಒಂದು ಬದಿಯ ನೀರಿನಲ್ಲಿ ಅಂದಾಜು 1.5 – 2 ವರ್ಷದ ಮೊಸಳೆಯ...