Wednesday, October 18, 2023

90 ಲಕ್ಷ ರೂ. ಮೌಲ್ಯದ ಅಂಬರ್ ಗ್ರೀಸ್ ಸಹಿತ ಮೂವರು ಅರೆಸ್ಟ್

Must read

ಮಂಗಳೂರು: ಪಣಂಬೂರು ಬೀಚ್ ಬಳಿ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಹೊಂದಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಉಡುಪಿ ಜಿಲ್ಲೆ ಸಾಲಿಗ್ರಾಮದ ಜಯಕರ ಶಿವಮೊಗ್ಗ ಸಾಗರದ ಆದಿತ್ಯ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾಂವ್ ನ ಲೋಹಿತ್ ಕುಮಾರ್ ಗುರಪ್ಪನವರ್ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮೂವರ ವಶದಿಂದ 90 ಲಕ್ಷ ರೂ. ಮೌಲ್ಯದ 900 ಗ್ರಾಂ ಅಂಬರ್ ಗ್ರೀಸ್ ವಶಪಡಿಸಿಕೊಂಡಿದ್ದಾರೆ.

ಪಣಂಬೂರು ಬೀಚ್ ಬಳಿ ಮೂವರು ಅಂಬರ್ ಗ್ರೀಸ್ ( ತಿಮಿಂಗಿಲ ವಾಂತಿ) ಹೊಂದಿರುವ ಕುರಿತು ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳ ಸಹಿತ ಅಂಬ‌ ಗ್ರೀಸ್ ( ತಿಮಿಂಗಿಲ ವಾಂತಿ) ನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ಬಂಧನ ಕಾರ್ಯಾಚರಣೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್‌ ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಅಪರಾಧ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

More articles

Latest article