Thursday, April 11, 2024

ಮಸೂದ್ ಕೊಲೆ ಪ್ರಕರಣ : ಮೂವರು ಆರೋಪಿಗಳಿಗೆ ಜಾಮೀನು

ಸುಳ್ಯ: ಕಳೆದ ವರ್ಷ ಸುಳ್ಯ ತಾಲೂಕಿನ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಎಂಬವರಿಗೆ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು.

ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ಮಾಡಿದ್ದರು. ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.

 

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...