Saturday, April 6, 2024

ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮಪಂಚಾಯತ್ ಕಾರ್ಯದರ್ಶಿ ವೇಣೂರಿನಲ್ಲಿ ಪತ್ತೆ

ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ವೇಣೂರು ಎಂಬಲ್ಲಿ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇದೀಗ ಮನೆಯವರು ಅವರನ್ನು ಮನೆಗೆ ಕರೆಸಿಕೊಂಡು ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ (57) ಎಂಬವರು ನಾಪತ್ತೆಯಾಗಿದ್ದು ಅವರ ಮೊಬೈಲ್ ವಾಲ್ಪಾಡಿಯ ಕೊಯ ಕ್ಕುಡೆ ಚಡಾವ್ ಎಂಬಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿತ್ತು.

ಪಂಚಾಯತ್ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಅವರ ನಾಪತ್ತೆ ಬಗ್ಗೆ ಅವರ ಪತ್ನಿ ವಂದನಾ ಪುಂಜಾಲಕಟ್ಟೆ ಪೋಲೀಸ್ ಠಾಣೆ ಯಲ್ಲಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಅದರಂತೆ ಅವರ ಮೊಬೈಲ್ ಲೊಕೇಶನ್ ಹಾಕಿದಾಗ ವಾಲ್ಪಾಡಿ ಕೊಯಕುಡೆ ಚಡಾವ್ ತೋರಿಸುತ್ತಿದ್ದುದರಿಂದ ಪುಂಜಾಲ್ಕಟ್ಟೆ ಪೊಲೀಸರು ಮತ್ತು ಸಂಬಂಧಿಕರು ಹುಡುಕಾಡಿಕೊಂಡು ಬಂದಿದ್ದರು. ಅದರೆ ಅವರ ಮೊಬೈಲ್ ಮಾತ್ರ ರಸ್ತೆ ಬದಿ ಪತ್ತೆಯಾಗಿದ್ದು ಬೈಕ್ ನಲ್ಲಿ ಬಂದಿದ್ದ ಲಕ್ಷ್ಮೀನಾರಾಯಣ ಪತ್ತೆಯಾಗಿರಲಿಲ್ಲ.

ಕೆ.ಎ.-21 , EC 5599 ನಂಬರ್ ನ ಹೀರೊ ನೀಲಿ ಬಣ್ಣದ ಬೈಕ್ ನಲ್ಲಿ ಅವರು ಬಂದಿದ್ದರೆನ್ನಲಾಗಿದೆ‌ .ಮೊಬೈಲ್ ನ್ನು ವಾಲ್ಪಾಡಿಯಲ್ಲಿ ಎಸೆದು ಬೈಕ್ ನಲ್ಲಿ ಹೋಗಿರಬಹುದೆಂದು ಹೇಳಲಾಗುತ್ತಿತ್ತು.

ಪರೀಕ್ಷೆಗಾಗಿ ತೆರಳಿದ್ದರಾ?

ಸೆ. 8 ರಂದು ಅಮ್ಟಾಡಿ ಗ್ರಾ.ಪಂ‌‌.ನಲ್ಲಿ ಗ್ರಾಮ ಸಭೆನಡೆದ ಬಳಿಕ ಇವರು ತುಂಬಾ ಒತ್ತಡ ದಲ್ಲಿದ್ದರು ಎಂದು ಹೇಳಲಾಗಿದೆ.

ಮಾನಸಿಕವಾಗಿ ನೊಂದುಕೊಂಡಿದ್ದ ಅವರು ಇತ್ತೀಚೆಗೆ ಬಹಳಷ್ಟು ಕುಗ್ಗಿ ಹೋಗಿದ್ದರು.

ಇಲ್ಲಿನ ಪಿ.ಡಿ.ಒ.ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಇವರಿಗೆ ಹೆಚ್ಚವರಿಯಾಗಿ ಪಿ.ಡಿ.ಒ.ಹುದ್ದೆಯನ್ನು ನೀಡಲಾಗಿತ್ತು.

ಆದರೆ ಇವರು ಎರಡು ಹುದ್ದೆಯನ್ನು ನಿಭಾಯಿಸಲು ಸಾಧ್ಯವಾಗದೆ ನೊಂದುಕೊಂಡಿದ್ದರು ಎನ್ನಲಾಗಿದೆ.

ಒತ್ತಡದಿಂದ ಇವರು ಅನಾರೋಗ್ಯಕ್ಕೆ ತುತ್ತಾಗಿದ್ದಾರಾ? ಎಂಬ ಪ್ರಶ್ನೆಯನ್ನು ಹಾಕುತ್ತಿದ್ದಾರೆ.

ಅವರು ನಿನ್ನೆ ಅಂದರೆ ಸೆ. 12 ರಂದುಮಧ್ಯಾಹ್ನ 12 ಗಂಟೆವರೆಗೆ ಆಫೀಸಿಗೆ ಬರದ ಕಾರಣ ಇಲ್ಲಿನ ಸಿಬ್ಬಂದಿ ಪೋನ್ ಮಾಡಿದಾಗ ನನಗೆ ಹುಷಾರಿಲ್ಲ ಕೆಲವೊಂದು ಟೆಸ್ಟ್ ಗಳನ್ನು ಇಸಿಜಿ‌ಸಹಿತ ಇನ್ನೂ ಕೆಲವು ಪರೀಕ್ಷೆ ನಡೆಸಿ ಮತ್ತೆ ಬರುವುದಾಗಿ ತಿಳಿಸಿದ್ದರಂತೆ. ಆ ಬಳಿಕ ಅಫೀಸಿಗೆ ಬರದೆ ಮನೆಗೂ ಹೋಗದೆ ಪೋನ್ ಸ್ವೀಚ್ ಆಫ್ ಆಗಿತ್ತು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...