ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ ಕಾರು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.
ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಡಿಕ್ಕಿ ಯಾಗಿದೆ.
ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.
ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು. ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಡಿಕ್ಕಿಯಾಗಿ ಸೇತುವೆ ಮೇಲಿದ್ದ ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು. ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ. ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ.
ಟ್ರಾಫಿಕ್ ಎಸ್.ಐ.ಸುತೇಶ್, ಎ.ಎಸ್.ಐ.ಸುರೇಶ್ ಹಾಗೂ ಟ್ರಾಫಿಕ್ ಪೋಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳದಲ್ಲಿದ್ದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.