ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರು, ಸೆ.1ರಂದು ಪಂಪ್‌ವೆಲ್‌ನಲ್ಲಿರುವ ಮೆಡಿಕಲ್‌ನಲ್ಲಿ ಓರ್ವ ಯುವತಿ ಆಕ್ರಮಣಕಾರಿ ರೀತಿಯಲ್ಲಿ ವರ್ತನೆ ಮಾಡುತ್ತಿರುವ ಬಗ್ಗೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಲಭಿಸಿತ್ತು. ಆಕೆ ಮಾದಕ ದ್ರವ್ಯ ಸೇವನೆ ಮಾಡಿರಬೇಕೆಂಬ ಸಂದೇಹದಿಂದ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದಾಗ ಆಕೆ ಅಧಿಕಾರಿಗಳ ಮೇಲೆ ಆಕ್ರಮಣಕಾರಿಯಾಗಿ ವರ್ತಿಸಿದ್ದಳು. ಆ ಬಳಿಕ ಠಾಣೆಯ ಮಹಿಳಾ ಸಿಬಂದಿ ಜತೆ ಇಲಾಖಾ ವಾಹನದಲ್ಲಿ ಅಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಪೂರಕ ಫಲಿತಾಂಶ ಬಂದಿಲ್ಲ. ಅನಂತರ ಅಕೆಯನ್ನು ಆಕೆಯ ಪೋಷಕರ ವಶಕ್ಕೆ ವಹಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.